ಭವಾನಿ ರೇವಣ್ಣಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರು : ಭವಾನಿ ರೇವಣ್ಣಗೆ ಹೈಕೋರ್ಟ್‌ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದ್ದು, ಮೈಸೂರು ಹಾಗೂ ಹೊಳೆನರಸೀಪುರಕ್ಕೆ ಹೋಗದಂತೆ ಷರತ್ತು ವಿಧಿಸಿದೆ. ಷರತ್ತುಬದ್ಧ

ಹಾಸನ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಅತ್ಯಾಚಾರ ಸಂತ್ರಸ್ತೆಯ ಅಪಹರಣದ ಸಂಚು ರೂಪಿಸಿದ ಪ್ರಮುಖ ಆರೋಪಿ ಭವಾನಿ ರೇವಣ್ಣ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ವಿಚಾರಣೆಯನ್ನು ಹೈಕೋರ್ಟ್‌ ಇಂದು ಮಂಗಳವಾರ ಕೈಗೆತ್ತಿಕೊಂಡು ನಿರೀಕ್ಷಣಾ ಜಾಮೀನು ನೀಡಿದೆ.

ಇದನ್ನೂ ಓದಿ: 2024-25ನೇ ಸಾಲಿನಿಂದ ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆ ಇಂಗ್ಲೀಷ್‌ ಮಾಧ್ಯಮದ ತರಗತಿಗಳು ಪ್ರಾರಂಭ

ವಿಚಾರಣೆಯ ಸಮಯದಲ್ಲಿ ಭವಾನಿ ರೇವಣ್ಣ ಅವರನ್ನು ಎಸ್‌ಐಟಿ ತನಿಖೆಗೆ ಒಳಪಡಿಸಿತ್ತು. ಆದರೆ ಬಂಧನ ಭೀತಿಯಿಂದ ಹೆದರಿದ್ದ ಭವಾನಿ ರೇವಣ್ಣ ಎಸ್‌ಐಟಿ ಕೈಗೆ ಸಿಗದೆ ಪಲಾಯನ ಮಾಡುತ್ತಿದ್ದರು. ಕೊನೆಗೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಗೆ ಬರುವವರೆಗೆ ಭವಾನಿ ರೇವಣ್ಣ ಅವರನ್ನು ಬಂಧಿಸದಂತೆ ಹೈಕೋರ್ಟ್‌ ಸೂಚಿಸಿತ್ತು.

ಬಳಿಕ ಎಸ್‌ಐಟಿ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ ರನ್ನು ತೀವ್ರವಾಗಿ ಪ್ರಶ್ನೆಗೊಳಪಡಿಸಲಾಗಿತ್ತು. 85 ಕ್ಕೂ ಹೆಚ್ಚು ಪ್ರಶ್ನೆಗಳಿಗೆ ಸ್ಪಷ್ಟೀಕರಣ ಕೇಳಲಾಗಿತ್ತು. ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣದ ಆರೋಪಿಗಳು ಭವಾನಿ ರೇವಣ್ಣ ಅವರ ಹೆಸರನ್ನು ಉಲ್ಲೇಖಿಸಿದ್ದು, ಅದು ಅವರಿಗೆ ಸಂಕಷ್ಟ ತಂದೊಡ್ಡಿತ್ತು.

ಅತ್ಯಾಚಾರದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ವಿರುದ್ಧ ಇನ್ನಷ್ಟು ಕ್ರಿಮಿನಲ್ ದೂರು ದಾಖಲಾಗುವುದನ್ನು ತಪ್ಪಿಸುವುದಕ್ಕಾಗಿ ಭವಾನಿ ರೇವಣ್ಣ  ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಏಳು ಆರೋಪಿಗಳನ್ನು ಸಂಪರ್ಕಿಸಿದ್ದರು ಎಂದು ಕರ್ನಾಟಕ ಪೊಲೀಸ್ ವಿಶೇಷ ತನಿಖಾ ತಂಡ ಕರ್ನಾಟಕ ಹೈಕೋರ್ಟ್‌ಗೆ ವಿವರಿಸಿದೆ. ಷರತ್ತುಬದ್ಧ

ಹೈಕೋರ್ಟ್‌ನಲ್ಲಿ ಜೂನ್ 14 ರಂದು ಪ್ರಜ್ವಲ್ ಅವರ ತಾಯಿ ಭವಾನಿ ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಎಸ್‌ಐಟಿ ಪರ ವಕೀಲರು ತಮ್ಮ ವಾದ ಮಂಡನೆ ಮಾಡುತ್ತ, ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯ ಅಪಹರಣದ ಸಂಚು ರೂಪಿಸಿದ್ದಲ್ಲದೆ, ಅದನ್ನು ಅನುಷ್ಠಾನಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ಭವಾನಿ ರೇವಣ್ಣ ನಿರ್ವಹಿಸಿದ್ದರು ಎಂಬುದಕ್ಕೆ ಎಸ್‌ಐಟಿ ಸಾಕ್ಷ್ಯ ಕಲೆ ಹಾಕಿದೆ. ಹೀಗಾಗಿ ಅವರಿಗೆ ಜಾಮೀನಿ ವಿಸ್ತರಿಸಬಾರದು ಎಂದು ಮನವಿ ಮಾಡಿದರು. ಭವಾನಿ ರೇವಣ್ಣ ಅವರ ಪರ ವಕೀಲರ ವಾದವನ್ನೂ ಆಲಿಸಿದ ಕೋರ್ಟ್ ಈ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು.

ಭವಾನಿ ರೇವಣ್ಣ ಗೆ ಮಧ್ಯಂತರ ಜಾಮೀನು ನೀಡುವಾಗ, ಜೂನ್ 7 ರಂದು ಎಸ್‌ಐಟಿ ಎದುರು ಹಾಜರಾಗಿ ತನಿಖೆಗೆ ಸಹಕರಿಸುವಂತೆ ಸೂಚಿಸಿತ್ತು. ಅದಾಗಿ, ಅವರ ಬಂಧನದ ವಿರುದ್ಧ ಮಧ್ಯಂತರ ರಕ್ಷಣೆಯನ್ನು ಒಂದು ವಾರದವರೆಗೆ ವಿಸ್ತರಿಸಿತ್ತು. ಮೇ 31 ರಂದು, ಚುನಾಯಿತ ಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯವು ತನ್ನ ಮಗನ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯ ಅಪಹರಣದಲ್ಲಿ ಭಾಗಿಯಾಗಿರುವ ಪ್ರಾಥಮಿಕ ಪ್ರಕರಣವನ್ನು ಕಂಡುಹಿಡಿದ ನಂತರ ಭವಾನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಷರತ್ತುಬದ್ಧ

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರವಿವರ್ಮ ಕುಮಾರ್  ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಪೀಠಕ್ಕೆ “ಈ ಮಹಿಳೆ ತನ್ನ ಮಗನ ವಿರುದ್ಧ ದೂರು ದಾಖಲಿಸುವುದನ್ನು ತಡೆಯಲು ಅಪಹರಣದ ಸೂತ್ರಧಾರಿಯಾಗಿದ್ದಳು ಎಂದು ತನಿಖೆಯಿಂದ ತಿಳಿದುಬಂದಿದೆ” ಎಂದು ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದರು. ಷರತ್ತುಬದ್ಧ

ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ಏಪ್ರಿಲ್‌ನಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ವಿಚಾರವಾಗಿ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ವಿರುದ್ದ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಮೈಸೂರು ಜಿಲ್ಲೆ ಕೆಆರ್‌ನಗರ ತಾಲ್ಲೂಕಿನ ಸಂತ್ರಸ್ತ ಮಹಿಳೆಯ ಅಪಹರಣ ಆರೋಪದಡಿ ರೇವಣ್ಣ ರನ್ನು ಬಂಧಿಸಲಾಗಿತ್ತು. ಷರತ್ತುಬದ್ಧ

ವಿಶೇಷ ತನಿಖಾ ತಂಡ ಶಾಸಕ ಎಚ್ ಡಿ ರೇವಣ್ಣ ಪತ್ನಿ ಭವಾನಿ ಅವರಿಗೂ ನೊಟೀಸ್‌ ಜಾರಿ ಮಾಡಿತ್ತು. ಆದರೆ ಭವಾನಿ ರೇವಣ್ಣ ಮಧ್ಯಂತರ ಜಾಮೀನು ಸಿಗುವ ತನಕವೂ ಅಂದರೆ ಜೂನ್ 7 ರ ತನಕವೂ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಪ್ರಕರಣದಲ್ಲಿ ಎಸ್‌ಐಟಿ ಬಂಧಿಸಬಹುದು ಎನ್ನುವ ಭೀತಿಯಿಂದ ಭವಾನಿ ರೇವಣ್ಣ  ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ನನ್ನ ಕಕ್ಷಿದಾರರು ಯಾವುದೇ ಪ್ರಕರಣದಲ್ಲಿ ಭಾಗಿಯಾಗಿಲ್ಲ.

ಆದರೂ ಅವರಿಗೆ ನೊಟೀಸ್‌ ಅನ್ನು ನೀಡಲಾಗಿದೆ. ಇದೇ ಪ್ರಕರಣದಲ್ಲಿ ಬಂಧಿಸುವ ಆತಂಕವೂ ಇದೆ. ಈ ಕಾರಣದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದ್ದು, ಇದನ್ನು ಪರಿಗಣಿಸಬೇಕು ಎಂದು ಭವಾನಿ ರೇವಣ್ಣ ಪರ ವಕೀಲರು ವಾದಿಸಿದರು. ಅಲ್ಲದೇ ಪ್ರತಿವಾದವನ್ನೂ ಆಲಿಸಿದರು. ಬಳಿಕ ಜೂನ್ ಆರಂಭದಲ್ಲಿ ಮಧ್ಯಂತರ ಜಾಮೀನು ನೀಡಿದ್ದರು.

ನಿರೀಕ್ಷಣಾ ಜಾಮೀನು ಅರ್ಜಿ ತೀರ್ಪು ಇಂದು ಮಂಗಳವಾರ ನಡೆದು ಉಚ್ಛನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. ಕೆ.ಆರ್‌.ನಗರದ ಸಂತ್ರಸ್ತೆಯೊಬ್ಬರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲೇರಿದ್ದ ಭವಾನಿ ರೇವಣ್ಣಗೆ ಮಂಗಳವಾರ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಇದರೊಂದಿಗೆ ಕೆಲವು ಷರತ್ತುಗಳನ್ನು ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇದೀಗ ಹೈಕೋರ್ಟ್ ತನ್ನ ಆದೇಶದಲ್ಲಿ ಭವಾನಿ ರೇವಣ್ಣ  ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸಬಾರದು ಎಂದು ಷರತ್ತು ವಿಧಿಸಿದೆ.

ಇನ್ನೂ ವಾದ ವಿವಾದ ನಡೆದ ಸಂದರ್ಭದಲ್ಲಿ ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಉತ್ತರಿಸಿದ್ದಾರೆ. ಈ ಕಾರಣದಿಂದ ಅವರು ತನಿಖೆಗೆ ಸಹಕರಿಸಿಲ್ಲ ಎಂಬ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿತು. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲು ಸಾಧ್ಯವಿಲ್ಲ. ಏಕೆಂದರೆ ಭವಾನಿ ರೇವಣ್ಣ ಸಂತ್ರಸ್ತೆಗೆ ಬಟ್ಟೆ ಊಟ ನೀಡಿದ್ದರು ಎಂಬುದು ಸಂತ್ರಸ್ತೆಯ ಹೇಳಿಕೆಯು ಉಲ್ಲೇಖವಾಗಿದೆ. ಇದೆಲ್ಲ ಆಲಿಸಿದ ಬಳಿಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ನೋಡಿ: ಅಂಗನವಾಡಿ ಕಾರ್ಯಕರ್ತರು ಪಿಯುಸಿ, ಪದವಿ ಮುಗ್ಸಿದ್ದಾರೆ, Janashakthi Media

Donate Janashakthi Media

Leave a Reply

Your email address will not be published. Required fields are marked *