ಬಾಗೇಪಲ್ಲಿ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌!

ಬೆಂಗಳೂರು: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಪ್ರಕಟಿಸಿದ್ದೂ, ಕಾಂಗ್ರೆಸ್ ಗೆ ಭಾರಿ ಹಿನ್ನೆಡೆಯುಂಟಾಗಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಪರಾಭವಗೊಂಡಿದ್ದ ಬಿಜೆಪಿಯ ಅಭ್ಯರ್ಥಿ ಸಿಮುನಿರಾಜು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಪೀಠ, ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದೆ.

ಇದನ್ನೂ ಓದಿ: ಚಂಡೀಗಢ | ಆದೇಶ ಪಾಲಿಸದಿದ್ದರೆ ಹೊರ ಹೋಗಿ ಎಸ್‌ಪಿಗೆ ಸಚಿವ ಅನಿಲ್ ಧಮಕಿ

ಅಸಿಂಧುಗೊಳಿಸಿದ ಆದೇಶವನ್ನು ಕೋರ್ಟ್, ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ರವಾನಿಸಲಾಗಿದೆ.

ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಗೆ ತಡೆಯಾಜ್ಞೆ ಕೋರಿ ಮೇಲ್ಮನವಿ ಸಲ್ಲಿಸಲು ಎಸ್‌.ಎನ್‌.ಸುಬ್ಬಾರೆಡ್ಡಿ ಅವರಿಗೆ ಅವಕಾಶ ಇದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ 6 ತಿಂಗಳೊಳಗಾಗಿ ತಡೆಯಾಜ್ಞೆ ನೀಡದಿದ್ದರೇ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಮರು ಚುನಾವಣೆ ನಡೆಸಬೇಕಾಗುತ್ತೆ.

ಇದನ್ನೂ ನೋಡಿ: ಕಾರ್ಮಿಕ–ರೈತ- ಕೂಲಿಕಾರರ ಮಹಾ ಹೋರಾಟ – ದೇಶವ್ಯಾಪಿ ಮುಷ್ಕರಕ್ಕೆ ಭಾರೀ ಸ್ಪಂದನೆ Janashakthi Media

Donate Janashakthi Media

Leave a Reply

Your email address will not be published. Required fields are marked *