ಬೆಂಗಳೂರು: ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಗೆ ಹೈಕೋರ್ಟ್ ಆದೇಶ ಹೊರಡಿಸುವ ಮೂಲಕ ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಶಾಸಕ ಟಿಡಿ ರಾಜೇಗೌಡಗೆ ಬಿಗ್ ಶಾಕ್ ನೀಡಿದೆ. ಮೇ 2 ರಂದು ಬೆಳಿಗ್ಗೆ 9 ಗಂಟೆಗೆ ಅಂಚೆ ಮರು ಮತ ಎಣಿಕೆ ನಡೆಯಲಿದೆ. ಚಿಕ್ಕಮಂಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಮರು ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ: ನಿತೀಶ್ ಕುಮಾರ್ ರನ್ನು ಮುಗಿಸಲು ಬಿಜೆಪಿ ಪ್ರಯತ್ನ: ತೇಜಸ್ವಿ ಯಾದವ್ ಆರೋಪ
ಎರಡು ವಾರಗಳ ಕಾಲಾವಕಾಶ ಮಧ್ಯಂತರ ತಡೆ ನೀಡಿದ್ದ ಹೈಕೋರ್ಟ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಇದೀಗ ಅಂಚೆ ಮತಗಳ ಮರು ಎಣಿಕೆ ಮಾಡಲು ಹೈಕೋರ್ಟ್ ಮತ್ತೆ ಆದೇಶ ಮಾಡಿದೆ. 201 ಮತಗಳ ಅಂತರದಿಂದ ಟಿಡಿ ರಾಜೇಗೌಡ ಗೆಲುವು ಸಾಧಿಸಿದ್ದರು.
ಹಿನ್ನೆಲೆ ಏನು?
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರು ಬಿಜೆಪಿಯ ಡಿ.ಎನ್. ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯಗಳಿಸಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ಲೋಪವಾಗಿದೆ ಮತ್ತು ಅರ್ಹ ಮತಗಳನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಆರೋಪಿಸಿ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನೂ ನೋಡಿ: ವಿಶ್ವ ಪುಸ್ತಕ ದಿನ: ಶಿಕ್ಷಣದ ಕೇಂದ್ರೀಕರಣದ ವಿರುದ್ಧ ಚಿಂತನೆಯ ಧ್ವನಿ Janashakthi Media
