ಬೆಂಗಳೂರು: ರಾಜ್ಯದಲ್ಲಿ ಬಹುದೊಡ್ಡ ಪೊಲೀಸ್ ಸಬ್ಇನ್ಸ್ಪೆಕ್ಟರ್(ಪಿಎಸ್‌ಐ) ನೇಮಕಾತಿ ಹಗರಣ ಸೇರಿದಂತೆ ಹಲವು ನೇಮಕಾತಿ ಅಕ್ರಮಗಳ ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರೋಪಿ ಆರ್. ಡಿ. ಪಾಟೀಲ್‌ಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ನೇಮಕಾತಿ ಪರೀಕ್ಷೆಗಳನ್ನು ತಿರುಚುವ, ಅಕ್ರಮವೆಸಗುವ ಕ್ರಿಮಿನಲ್ ಪಿತೂರಿಗಳಲ್ಲಿ ಪಾಟೀಲ್ ಪಾತ್ರವನ್ನು ತೋರಿಸುವ ಪ್ರಾಥಮಿಕ ಸಾಕ್ಷ್ಯವನ್ನು ಪ್ರಾಸಿಕ್ಯೂಷನ್ ಸಲ್ಲಿಸಿದೆ. ತನಿಖಾಧಿಕಾರಿಗಳು ಪಾಟೀಲ್ ಖರೀದಿಸಿದ ಮೊಬೈಲ್ ಫೋನ್ಗಳು ಮತ್ತು ಸಿಮ್ ಕಾರ್ಡ್ಗಳನ್ನು ವಶಪಡಿಸಿಕೊಂಡಿದ್ದಾರೆ ಮತ್ತು ವಂಚನೆಗೆ ಅವರನ್ನು ಲಿಂಕ್ ಮಾಡುವ ಕರೆ ವಿವರ ದಾಖಲೆಗಳನ್ನು ಸಲ್ಲಿಸಿದ್ದಾರೆ.
ಇದನ್ನೂ ಓದಿ: ವಿಪಕ್ಷದ 240 ಸಂಸದರನ್ನು ಅಮಾನತುಗೊಳಿಸುವ ಸಂಚು ಇದೆ: ಮಾಣಿಕಮ್ ಟ್ಯಾಗೋರ್ ಆರೋಪ
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣದ ತನಿಖೆ ಪೂರ್ಣಗೊಂಡಿದೆ, ಎಲ್ಲ ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ. ಪಾಟೀಲ್ ಈಗಾಗಲೇ ಎರಡು ವರ್ಷಕ್ಕೂ ಅಧಿಕ ಕಾಲದಿಂದ ಸೆರೆವಾಸದಲ್ಲಿದ್ದಾರೆ. ಅವರನ್ನು ನ್ಯಾಯಾಂಗ ಬಂಧನದಲ್ಲಿ ಮುಂದುವರಿಸುವ ಅವಶ್ಯಕತೆ ಇಲ್ಲ. ಹಾಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದ್ದರು.
ಸದ್ಯ ಕೋಕಾ ಕಾಯಿದೆಯಡಿ 2023ರಲ್ಲಿ ಬಂಧನಕ್ಕೊಳಗಾಗಿ ಸದ್ಯ ಮೈಸೂರು ಕಾರಾಗೃಹದಲ್ಲಿರುವ ಪಾಟೀಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ರಾಜೇಶ್ ಕೆ. ರೈ ಅವರಿದ್ದ ಕಲಬುರಗಿ ಪೀಠ ಈ ಆದೇಶ ನೀಡಿದೆ.
ಇದನ್ನೂ ನೋಡಿ: “ಸಂಘಟನೆ ಹಕ್ಕಿಗೆ ಕೈ ಹಾಕಿದರೆ ಹೋರಾಟ ತೀವ್ರ: ಮೀನಾಕ್ಷಿ ಸುಂದರಂ ಎಚ್ಚರಿಕೆ” Janashakthi Media
