‘ನೈಜ ಅಪರಾಧಗಳ ತನಿಖೆ ಇಲ್ಲ’: ಕರ್ನಾಟಕ ಪೊಲೀಸರ ವಿರುದ್ಧ ಹೈಕೋರ್ಟ್ ಕಿಡಿ

ಬೆಂಗಳೂರು: ಲಿವ್‌-ಇನ್‌ ಸಂಬಂಧ, ವೈವಾಹಿಕ ಸಂಬಂಧಿತ ಪ್ರಕಣಗಳ ಹಿಂದೆ ರಾಜ್ಯದ ಪೊಲೀಸರು ಬಿದ್ದಿದ್ದಾರೆಯೇ ವಿನಾ ನೈಜ ಅಪರಾಧಗಳ ತನಿಖೆ ನಡೆಸುತ್ತಿಲ್ಲ ಎಂದು ಏಪ್ರಿಲ್‌ 25ರಂದು ಕರ್ನಾಟಕ ಹೈಕೋರ್ಟ್‌ ಕಿಡಿಕಾರಿದೆ.

ಕಾಂತಾರ ಸಿನಿಮಾದ ದೈವಪಾತ್ರಕ್ಕೆ ಅಪಮಾನ ಮಾಡಿದ ಸಂಬಂಧದ ಪ್ರಕರಣ ರದ್ದತಿ ಕೋರಿ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ನಡೆಸುತ್ತಿದ್ದರು.

ಇದನ್ನೂ ಓದಿ: ಪಿಡಿಎಸ್ ಹಗರಣ: ಪಶ್ಚಿಮ ಬಂಗಾಳದ ಹಲವು ಸ್ಥಳಗಳಲ್ಲಿ ಇಡಿ ಶೋಧ

ವಿಚಾರಣೆಯ ಒಂದು ಹಂತದಲ್ಲಿ “ರಣವೀರ್‌ ಸಿಂಗ್‌ ಅವರು ಚಾಮುಂಡಿ ಬೆಟ್ಟಕ್ಕೆ ನೀಡಲು ಭದ್ರತೆಯ ಸಮಸ್ಯೆ ಇದೆ” ಎಂದು ರಣವೀರ್‌ ಪರ ಹಿರಿಯ ವಕೀಲ ಸಜನ್‌ ಪೂವಯ್ಯ ಹೇಳಿದರು.

ಈ ಹಂತದಲ್ಲಿ ದೂರುದಾರರ ಪರ ವಕೀಲ ಸಿಜಿ ಮಲೆಯಾಳ್‌ ಅವರು “ಕರ್ನಾಟಕ ಪೊಲೀಸರು ಶಕ್ತಿಯುತವಾಗಿದ್ದು, ರಕ್ಷಣೆ ನೀಡುತ್ತಾರೆ” ಎಂದು ಸಮರ್ಥನೆಗೆ ಮುಂದಾದರು.

ಈ ಹಂತದಲ್ಲಿ ಸಿಜಿ ಮಲೆಯಾಳ್‌ ಅವರನ್ನು ತಡೆದ ಪೀಠವು “ಒಂದು ನಿಮಿಷ, ಕರ್ನಾಟಕ ಪೊಲೀಸರು ಎಷ್ಟು ಬಲಶಾಲಿಗಳು ಎಂದರೆ ಅವರು ಲಿವ್‌ ಇನ್‌ ಸಂಬಂಧ, ದಂಪತಿಯ ಹಿಂದೆ ಹೋಗುತ್ತಾರೆ. ನೈಜ ಅಪರಾಧಗಳನ್ನು ಯಾರೂ ತನಿಖೆ ಮಾಡುತ್ತಿಲ್ಲ. ಎಲ್ಲರೂ ಬಿಎನ್‌ಎಸ್‌ ಸೆಕ್ಷನ್‌ 69ರ (ಮದುವೆ ನೆಪದಲ್ಲಿ ಲೈಂಗಿಕ ದುರ್ಬಳಕೆ ಸಂಬಂಧಿತ ಅಪರಾಧಗಳು) ಅಡಿ ಅಪರಾಧಗಳನ್ನು ಮಾತ್ರ ತನಿಖೆ ಮಾಡುತ್ತಾರೆ” ಎಂದು ಕಿಡಿಕಾರಿತು.

ಇದನ್ನೂ ನೋಡಿ: “ಮಹಿಳಾ ಮೀಸಲಾತಿ ಮಸೂದೆ- ಮೂರು ದಶಕಗಳು:ಅವಲೋಕನ”

Donate Janashakthi Media

Leave a Reply

Your email address will not be published. Required fields are marked *