ಧರ್ಮಸ್ಥಳ ಪ್ರಕರಣ: ಸಮೀರ್‌ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ಧರ್ಮಸ್ಥಳದ ಅಸಹಜ ಸಾವುಗಳ ತನಿಖೆಗೆ ಸಂಬಂಧಿಸಿದಂತೆ ಕಾಲ್ಪನಿಕ ವಿಚಾರಗಳನ್ನು ಆಧರಿಸಿ, ಕೃತಕ ಬುದ್ಧಿಮತ್ತೆ (ಎಐ) ನೆರವಿನಿಂದ ವಿಡಿಯೊ ಬಿತ್ತರಿಸಿದ ಪ್ರಕರಣದಲ್ಲಿ ಯೂಟ್ಯೂಬರ್‌ ಎಂ.ಡಿ.ಸಮೀರ್‌ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ಹೈಕೋರ್ಟ್‌ ತಡೆ ನೀಡಿದೆ.

‘ನನ್ನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಎಂ.ಡಿ.ಸಮೀರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಇದನ್ನೂ ಓದಿ: ಚೀಲ ಖರೀದಿ ಅಕ್ರಮ: ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್ ಸೂಚನೆ

ಅಭಿಯೋಜಕಿ ಅಸ್ಮಾ ಕೌಸರ್‌, ಸಮೀರ್‌ ಸಾರ್ವಜನಿಕ ರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ವಾದಿಸಿದರು. ವಾದ ಆಲಿಸಿದ ನ್ಯಾಯಾಲಯವು ತನಿಖೆಗೆ ತಡೆ ನೀಡಿ ಏ.22ಕ್ಕೆ ವಿಚಾರಣೆ ಮುಂದೂಡಿದೆ.

ಇದನ್ನೂ ನೋಡಿ: ಉನ್ನತ ಶಿಕ್ಷಣ ‘ಉದ್ಯಮ’ವಾಗುತ್ತಿದೆ: ಬರಗೂರು ರಾಮಚಂದ್ರಪ್ಪ ಟೀಕೆ Janashakthi Media

Donate Janashakthi Media

Leave a Reply

Your email address will not be published. Required fields are marked *