ಬೆಂಗಳೂರು: ಪೊಲೀಸ್ ಇಲಾಖೆಯು ವಾಟ್ಸಾಪ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಆರೋಪಿಗಳಿಗೆ ನೋಟಿಸ್ ಕಳುಹಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಉನ್ನತ ನ್ಯಾಯಾಲಯ ಸ್ಪಷ್ಟಪಡಿಸಿದೆ. ವಾಟ್ಸಾಪ್
ಬಿಎನ್‌ಎಸ್ ಸೆಕ್ಷನ್ 35ರ ಅಡಿಯಲ್ಲಿ ತನಿಖಾಧಿಕಾರಿಗಳು ವಿಚಾರಣೆಯ ನೋಟಿಸ್ ಅನ್ನು ಸಂಬಂಧಪಟ್ಟ ವ್ಯಕ್ತಿಗೆ ಖುದ್ದಾಗಿ ಹಸ್ತಾಂತರಿಸುವುದು ಕಡ್ಡಾಯವಾಗಿದೆ.
ಇದನ್ನೂ ಓದಿ: ಮಂಗಳೂರು| ಆರಿಫ್ ಹತ್ಯೆ ಪ್ರಕರಣದ ತನಿಖೆ ಸಿಸಿಬಿ ಯ ಎಸಿಪಿ ಗೆ ವರ್ಗಾವಣೆ
ವಂಚನೆ ಪ್ರಕರಣದ ಆರೋಪಿಯೊಬ್ಬರು ಸಲ್ಲಿಸಿದ್ದ ಬಿಡುಗಡೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಈ ಮಹತ್ವದ ಆದೇಶ ನೀಡಿದೆ.
ಸುಮಾರು 40 ದಿನಗಳ ಕಾಲ ಉದ್ದೇಶಪೂರ್ವಕವಾಗಿ ತಲೆಮರೆಸಿಕೊಂಡು ನೋಟಿಸ್ ಸ್ವೀಕರಿಸದೆ ತಪ್ಪಿಸಿಕೊಂಡಿದ್ದ ಅರ್ಜಿದಾರನ ನಡೆಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಎಲೆಕ್ಟ್ರಾನಿಕ್ ಸಂವಹನ ಅಧಿಕೃತ ನೋಟಿಸ್ ಜಾರಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂಬ ವಾದವನ್ನು ಎತ್ತಿ ಹಿಡಿದ ನ್ಯಾಯಪೀಠ, ಬಂಧನಕ್ಕೆ ಸೂಕ್ತ ಕಾರಣಗಳಿರುವುದನ್ನು ಗಮನಿಸಿ ಆರೋಪಿಯ ಮನವಿಯನ್ನು ವಜಾಗೊಳಿಸಿದೆ.
ಈ ಮೂಲಕ ಕಾನೂನು ಪ್ರಕ್ರಿಯೆಯಲ್ಲಿ ಡಿಜಿಟಲ್ ನೋಟಿಸ್‌ಗಳ ಮಿತಿ ಮತ್ತು ಖುದ್ದು ಹಾಜರಾತಿಯ ಅನಿವಾರ್ಯತೆಯನ್ನು ನ್ಯಾಯಾಲಯ ಪುನರುಚ್ಚರಿಸಿದೆ.
ಇದನ್ನೂ ನೋಡಿ: ಬಿಜೆಪಿ–ಸಂಘಪರಿವಾರದಿಂದ ಇತಿಹಾಸ ವಿರೂಪಗೊಳಿಸುವ ಪ್ರಯತ್ನ – ಪ್ರಿಯಾಂಕ್ ಖರ್ಗೆ Janashakthi Media
