ಬೆಂಗಳೂರು| ಮೇ.5 – ಮೇ 31ರವರೆಗೆ ಹೈಕೋರ್ಟ್‌ಗೆ ಬೇಸಿಗೆ ರಜೆ

ಬೆಂಗಳೂರು: ಮೇ.5 ಸೋಮವಾರದಿಂದ ಮೇ 31ರವರೆಗೆ ಹೈಕೋರ್ಟ್‌ಗೆ ಬೇಸಿಗೆ ರಜೆ ಇರಲಿದ್ದು, ಕೋರ್ಟ್ ಕಲಾಪಗಳು ಜೂ.2ರಿಂದ ಪುನರಾರಂಭವಾಗಲಿವೆ.

ರಜೆ ಅವಧಿಯಲ್ಲಿ ತುರ್ತು ಅರ್ಜಿಗಳ ವಿಚಾರಣೆಗೆ ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಮೇ 6, 8, 13, 15, 20, 22, 27 ಮತ್ತು 29ರಂದು ರಜಾಕಾಲದ ಪೀಠಗಳು ಕಾರ್ಯ ನಿರ್ವಹಿಸಲಿವೆ.

ರಜೆ ಅವಧಿಯಲ್ಲಿ ಬೆಂಗಳೂರು ಮತ್ತು ಧಾರವಾಡ ಪೀಠಗಳು ಬೆಳಗ್ಗೆ 10.30ರಿಂದ ಕಲಾಪ ಆರಂಭಿಸಿದರೆ, ಕಲಬುರಗಿ ಪೀಠ ಬೆಳಿಗ್ಗೆ 8ಕ್ಕೆ ಕಾರ್ಯಾರಂಭಗೊಳ್ಳಲಿದೆ.

ಇದನ್ನೂ ಓದಿ: ನರೇಂದ್ರ ಮೋದಿ ಘೋಷಣೆ ಮಾಸ್ಟರ್ ಸ್ಟ್ರೋಕ್ ಎಂದು ಬಣ್ಣಿಸುವ ಬಿಜೆಪಿಗರು: ಪ್ರಿಯಾಂಕ್ ಖರ್ಗೆ

ಈ ಅವಧಿಯಲ್ಲಿ ಕಾರ್ಯ ನಿರ್ವಹಿಸುವ ರಜಾಪೀಠಗಳಿಗೆ ನ್ಯಾಯಮೂರ್ತಿಗಳನ್ನು ನಿಯೋಜಿಸಿ ಸಿಜೆ ಸೂಚನೆ ಮೇರೆಗೆ ರಿಜಿಸ್ಟ್ರಾ‌ರ್ ಜನರಲ್ ಆದೇಶ ಹೊರಡಿಸಿದ್ದಾರೆ.

ರಜೆ ಅವಧಿ ಯಲ್ಲಿ ಯಾವುದೇ ಮೇಲ್ಮನವಿ ಹಾಗೂ ಹಳೆಯ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳುವುದಿಲ್ಲ. ಕೇವಲ ತುರ್ತು ಅರ್ಜಿಗಳನ್ನು ಮಾತ್ರ ವಿಚಾರಣೆಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ನೋಡಿ: ಬಸವ ಜಯಂತಿ ವಿಶೇಷ | ಬಸವಣ್ಣನ ವಚನಗಳು | ಎಚ್.ಸಿ. ಉಮೇಶ್ Janashakthi Media

Donate Janashakthi Media

Leave a Reply

Your email address will not be published. Required fields are marked *