ಲಕ್ನೋ: ಉತ್ತರಪ್ರದೇಶ ರಾಜ್ಯದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಆಡಳಿತದ ವಿರುದ್ಧ ಸಮಾಜವಾದಿ ಪಕ್ಷದ ನೇತೃತ್ವದಲ್ಲಿ ಅಖಿಲೇಶ್ ಯಾದವ್ ಪಾದಯಾತ್ರೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಪಾದಯಾತ್ರೆಯಲ್ಲಿ ಭಾಗಿಯಾದವರನ್ನು ಪೊಲೀಸರು ಲಕ್ನೋದ ಮಾರ್ಗ ಮಧ್ಯದಲ್ಲಿ ನಡೆದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಉತ್ತರ ಪ್ರದೇಶದಲ್ಲಿ ಅಧಿವೇಶನದ ಮೊದಲ ದಿನವಾದ ಇಂದು ಸಮಾಜವಾದಿ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಹಜರತ್‌ಗಂಜ್ ಪ್ರದೇಶದಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಜಮಾಯಿಸಿ, ಅಲ್ಲಿಂದ ಉತ್ತರ ಪ್ರದೇಶ ವಿಧಾನಸಭೆಗೆ ಮೆರವಣಿಗೆ ಸಾಗಿತು. ಪೊಲೀಸರು ಅವರನ್ನು ತಡೆದಿದ್ದರು.
ಉತ್ತರ ಪ್ರದೇಶದ ವಿಧಾನ ಸಭೆಗೆ ತೆರಳುತ್ತಿದ್ದಾಗ ಪೊಲೀಸರು ಅವರನ್ನು ತಡೆದರು. ಪೊಲೀಸರ ಕ್ರಮ ಖಂಡಿಸಿ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಕೂಡಲೇ ಧರಣಿ ಸತ್ಯಾಗ್ರಹ ನಡೆಸಿದರು.
ತಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲು ಉತ್ತರಪ್ರದೇಶ ಸರಕಾರ ಭಯಪಡುತ್ತಿದೆ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಅಖಿಲೇಶ್ ಯಾದವ್ ಸೇರಿದಂತೆ ಪಕ್ಷದ ಇತರ ಶಾಸಕರು, ಸಂಸದರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು, ವಿಧಾನಸಭಾದ ಹೊರಭಾಗದಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಸಮೀಪ ಧರಣಿ ನಡೆಸಿ ಅಣಕು ಕಲಾಪ ನಡೆಸಿರುವುದಾಗಿ ವರದಿ ತಿಳಿಸಿದೆ.
ಸಂಚಾರ ದಟ್ಟಣೆ ತಪ್ಪಿಸಲು ಸಮಾಜವಾದಿ ಪಕ್ಷದ ಶಾಸಕರಿಗೆ ಬದಲಿ ಮಾರ್ಗ ಬಳಸಲು ಸೂಚಿಸಲಾಗಿತ್ತು. ಆದರೆ ಮಾರ್ಗಸೂಚಿಯನ್ನು ಅನುಸರಿಸಲು ನಿರಾಕರಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.