ಹಿಮಾಚಲ ಪ್ರದೇಶದ ಕುಲುವಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು ಹಲವು ಮನೆಗಳು ನೆಲಕಚ್ಚಿವೆ. ಕಳೆದ ಕೆಲವು ದಿನಗಳಿಂದ ಇಲ್ಲಿ ಮಳೆಯ ಪ್ರಮಾಣ ಹೆಚ್ಚಿದೆ. ಭೂಕುಸಿತದಿಂದ ಹಲವು ಮನೆಗಳು ಕುಸಿದಿವೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಕುಲುವಿನಲ್ಲಿ ಹೊಸ ಬಸ್ ನಿಲ್ದಾಣದ ಬಳಿ ನಿರ್ಮಿಸಲಾಗಿದ್ದ 8 ರಿಂದ 9 ಕಟ್ಟಡಗಳು ಕುಸಿದುಬಿದ್ದಿವೆ.
ಹಿಮಾಚಲ ಪ್ರದೇಶಳ ಹಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಘಡಗಳು, ಪ್ರಾಣ ಹಾನಿ ಸುದ್ದಿಯಾಗುತ್ತಲೇ ಇವೆ.
ಇದನ್ನೂ ಓದಿ:ಹಿಮಾಚಲ ಪ್ರದೇಶಕ್ಕೆ 11 ಕೋಟಿ ಆರ್ಥಿಕ ನೆರವು ಘೋಷಿಸಿದ ಛತ್ತೀಸ್‌ಗಢದ ಮುಖ್ಯಮಂತ್ರಿ
ಕಲ್ಲುವಿನ ಅನ್ನಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಅನೇಕ ಮನೆಗಳು ಏಕಾಏಕಿ ನೆಲಸಮವಾಗಿವೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಟ್ಟಡಗಳು ನೆಲಕ್ಕುರುಳುವ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಇಂದಿನಿಂದ ಎರಡು ದಿನಗಳ ಕಾಲ ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು,ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಸರ್ಕಾರ ಇಡೀ ರಾಜ್ಯವನ್ನೂ ನೈಸರ್ಗಿ ವಿಕೋಪ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದೆ.