ಬೆಂಗಳೂರು: 2023-24ನೇ ಸಾಲಿನಲ್ಲಿ ನಿಯೋಜಿಸಲಾದ ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕಾಗಿ ಕರ್ನಾಟಕ 2ನೇ ಸ್ಥಾನವನ್ನು ಪಡೆದುಕೊಂಡಿದೆ. ಪವನಶಕ್ತಿ
ಹೊಸದಿಲ್ಲಿಯಲ್ಲಿ ಶನಿವಾರ ನಡೆದ ‘ಗ್ಲೋಬಲ್ ವಿಂಡ್ ಡೇ’ 2024 “ಪವನ್-ಉರ್ಜಾ: ಪವರ್ನಿಂಗ್ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್ ಅವರಿಂದ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪಯ್ಯ ಪ್ರಶಸ್ತಿ ಸ್ವೀಕರಿಸಿದರು.
ಪವನ ವಿದ್ಯುತ್ ವಲಯದಲ್ಲಿನ ಸಾಧನೆಯನ್ನು ಗುರುತಿಸಿ ರಾಜ್ಯಕ್ಕೆ ಪ್ರಶಸ್ತಿ ನೀಡಲಾಗಿದೆ. ಗುಜರಾತ್ ಅಗ್ರಸ್ಥಾನ ಪಡೆದರೆ, ತಮಿಳುನಾಡು 3ನೇ ಸ್ಥಾನ ಪಡೆದುಕೊಂಡಿದೆ.
ಅತ್ಯಧಿಕ ಪವನ ವಿದ್ಯುತ್ ಸಾಮರ್ಥ್ಯಕ್ಕಾಗಿ ಕರ್ನಾಟಕಕ್ಕೆ ಸಂದಿರುವ ಪ್ರಶಸ್ತಿ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್, “ಈ ಪ್ರಶಸ್ತಿಯು ನವೀಕರಿಸಬಹುದಾದದ ಇಂಧನ ವಲಯದಲ್ಲಿನ ನಮ್ಮ ಬದ್ಧತೆಯನ್ನು ಹೆಚ್ಚಿಸಿದೆ. ಈ ಸಾಧನೆ ಹಿಂದೆ ಕ್ರೆಡಲ್ ಅಧಿಕಾರಗಳ ಶ್ರಮವಿದ್ದು, ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ,” ಎಂದಿದ್ದಾರೆ.
ಇದನ್ನು ಓದಿ : ತೆರಿಗೆ ಹಾಗೂ ಮದ್ಯದ ಮೇಲಿನ ಮಾರಾಟ ತೆರಿಗೆ ಹೊರತು ಪಡಿಸಿ ಇತರ ಯಾವುದೇ ಮೂಲಗಳು ಸರ್ಕಾರಕ್ಕಿಲ್ಲ
“ವಿದ್ಯುತ್ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ರಾಜ್ಯ ಸರ್ಕಾರ ಗಮನಹರಿಸಿದೆ. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ನಮ್ಮ ಇಲಾಖೆಯು ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡುತ್ತದೆ,” ಎಂದು ಸಚಿವರು ತಿಳಿಸಿದ್ದಾರೆ. ಪವನಶಕ್ತಿ
ಪ್ರಶಸ್ತಿ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ, “ಒಳ್ಳೆಯ ಕೆಲಸ ಮಾಡಿದಾಗ ಅದನ್ನು ಗುರುತಿಸಿ ನೀಡುವ ಪ್ರಶಸ್ತಿ ಮತ್ತಷ್ಟು ಕೆಲಸ ಮಾಡುವ ಪ್ರೇರಣೆ ತುಂಬುತ್ತದೆ. ಇಂಗಾಲದ ಹೊರಸೂಸುವಿಕೆಯ ಪ್ರಮಾಣ ಕಡಿಮೆ ಮಾಡುವುದರ ಜತೆಗೆ ಗಾಳಿಯ ಗುಣಮಟ್ಟ ಸುಧಾರಿಸುವ ಪರಿಸರ ಸ್ನೇಹಿ ಕ್ರಮಗಳ ಹೊರತಾಗಿಯೂ ಪವನ ವಿದ್ಯುತ್ ಸುಸ್ಥಿರ ಆರ್ಥಿಕತೆ ಸಾಧಿಸಲು ನೆರವಾಗುತ್ತದೆ. ಇಂಧನ ಕ್ಷೇತ್ರಕ್ಕೆ ಪೂರಕವಾದ ನೀತಿ ಹಾಗೂ ಹೂಡಿಕೆಗಳು ಕರ್ನಾಟಕವನ್ನು ನವೀಕರಿಸಬಹುದಾದ ಇಂದನ ವಲಯದ ಶಕ್ತಿ ಕೇಂದ್ರವಾಗಿ ರೂಪಿಸುವುದಾಗಿ ಹೇಳಿದ್ದಾರೆ. ಪವನಶಕ್ತಿ
ಇದನ್ನು ನೋಡಿ : ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ ಯುಕೆಜಿ ಪ್ರಾರಂಭಿಸಿ – ತಜ್ಞರ ಆಗ್ರಹ Janashakthi Media