ಬೆಂಗಳೂರು: ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ ಗಳನ್ನು ಕಳೆದ ಬಿಜೆಪಿ ಅವಧಿಯಲ್ಲಿ ತೆಗೆದುಕೊಳ್ಳಲಾಗುತ್ತಿತ್ತು ಎಂದು ಕಾಂಗ್ರೆಸ್ ಗಂಭೀರವಾಗಿ ಆರೋಪ ಮಾಡಿತ್ತು. ಆದರೆ ಇದೀಗ ಬಿಜೆಪಿಗಿಂತಲೂ ಕಾಂಗ್ರೆಸ್ ಅವಧಿಯಲ್ಲಿ ಅತಿ ಹೆಚ್ಚು ಕಮಿಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘ ಇದೀಗ ಗಂಭೀರವಾದ ಆರೋಪ ಮಾಡುತ್ತಿದೆ.
ಡಿ. ಕೆಂಪಣ್ಣ ನೇತೃತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ನಡೆದ ಹೋರಾಟದ ಪ್ರತಿಫಲವಾಗಿ ನಿಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಆದರೆ, ನಿಮ್ಮ ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ.
ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ, ಭ್ರಷ್ಟಾಚಾರದ ಬಗ್ಗೆ ಗಮನಕ್ಕೆ ತಂದರೂ, ಕಮಿಷನ್ ಹೆಚ್ಚಾಗುತ್ತಿದೆಯೇ ವಿನಹ ಕಡಿಮೆಯಾಗುತ್ತಿಲ್ಲ ಎಂದು ಸಂಘ ದೂರಿದೆ.
ಇದನ್ನೂ ಓದಿ: ಬೆಂಗಳೂರು| ಕರ್ನಾಟಕ- ಮಹಾರಾಷ್ಟ್ರ ಬಸ್ ಸಂಚಾರ ಪುನಾರಂಭ
ಕಾಮಗಾರಿ ಮುಕ್ತಾಯಗೊಂಡಿರುವ ಬಿಲ್‌ಗಳ ಪಾವತಿ ಮೂರು ವರ್ಷಗಳಿಂದ ಬಾಕಿ ಉಳಿದಿದೆ. ಗುತ್ತಿಗೆದಾರರ ಸಂಕಷ್ಟಗಳನ್ನು ಸಾಕಷ್ಟು ಬಾರಿ ತಮ್ಮಲ್ಲಿ ಹೇಳಿಕೊಂಡಿದ್ದೇವೆ. ಆದರೂ ತಾವು ಗಂಭೀರವಾಗಿ ಪರಿಗಣಿಸಿಲ್ಲ.
ತುರ್ತಾಗಿ ನಮ್ಮ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳ ಸಭೆ ಕರೆದು ಚರ್ಚೆ ನಡೆಸಬೇಕು. ಇಲ್ಲದಿದ್ದರೆ, ರಾಜ್ಯಪಾಲರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಭ್ರಷ್ಟಾಚಾರದ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಸಂಘದ ರಾಜ್ಯ ಘಟಕದ ಅಧ್ಯಕ್ಷ ಆರ್. ಮಂಜುನಾಥ್ ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಎಂ. ರವೀಂದ್ರ ಅವರು, ‘ಮೂರು ವರ್ಷಗಳಿಂದ ಬಾಕಿಯಿರುವ ₹32 ಸಾವಿರ ಕೋಟಿ ಬಿಲ್ ಬಾಕಿಗೆ ಹಣ ಬಿಡುಗಡೆ ಭಾಗ್ಯ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ನೋಡಿ: ಇಂಗ್ಲೀಷ್ ಕಲಿಯೋಣ ಬನ್ನಿ | ಮಾರ್ಚ್ 02 ರಿಂದ ಪ್ರತಿ ರವಿವಾರ ಬೆಳಗ್ಗೆ 9 ಗಂಟೆಗೆ