ನವದೆಹಲಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಅರ್ಜಿಯ ತುರ್ತು ವಿಚಾರಣೆಗೆ ಕೋರ್ಟ್ ನಿರಾಕರಿಸಿದೆ.
ಇಂದು ಅರ್ಜಿ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಪೀಠದ ಮುಂದೆ ಬಂದಿತು. ಆಗ ತುರ್ತಾಗಿ ಅರ್ಜಿ ವಿಚಾರಣೆ ನಡೆಸುವ ಅಗತ್ಯವಿದೆಯೇ? ಎಂದು ಅವರು ಪ್ರಶ್ನಿಸಿದರು. ಮುಂದಿನ ವಾರ ವಿಚಾರಣೆ ನಡೆಸಬಹುದೇ? ಎಂದು ಕೇಳಿದರು. ವಕೀಲ ಸಂಜಯ ಹೆಗಡೆ ಅರ್ಜಿಯ ತುರ್ತು ವಿಚಾರಣೆಗಾಗಿ ಮನವಿ ಮಾಡಿದ್ದರು.
ಹೋಳಿ ಹಬ್ಬದ ರಜೆಯ ಬಳಿಕ ಮೇಲ್ಮನವಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಲಾಗಿದೆ. ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿ ಹಿನ್ನೆಲೆ, ತುರ್ತಾಗಿ ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ಗೆ ಮನವಿ ಮಾಡಲಾಗಿತ್ತು.
ಸೋಮವಾರವೇ ವಿಚಾರಣೆಗೆ ವಕೀಲ ಸಂಜಯ್ ಹೆಗಡೆ ಮನವಿ ಮಾಡಿದ್ದರು. ಆದರೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್. ವಿ. ರಮಣ, ವಕೀಲ ಸಂಜಯ್ ಹೆಗಡೆ ಮನವಿ ತಿರಸ್ಕರಿಸಿದ್ದಾರೆ. ಹೋಳಿ ಹಬ್ಬದ ರಜೆ ಬಳಿಕ ಅರ್ಜಿ ವಿಚಾರಣೆ ತಿಳಿಸಿದ್ದಾರೆ.