ಹಿಂದಿ, ಇಂಗ್ಲಿಷ್‍ ಪ್ರಶ್ನೆಪತ್ರಿಕೆ: ಕನ್ನಡಿಗರ ಅಸಮಾಧಾನ

  • ಮುಖ್ಯಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ, ಪೂರ್ವಭಾವಿ ಪರೀಕ್ಷೆಗೇಕಿಲ್ಲ
  • ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ, ಕನ್ನಡಕ್ಕಾಗಿ ಅಭಿಯಾನ

 

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು ಭಾನುವಾರ ನಡೆಸಿದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾತ್ರ ನೀಡಿದ್ದರ ವಿರುದ್ಧ ಕನ್ನಡಿಗರು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ಹೊರಹಾಕಿದರು.

‘ಮುಖ್ಯಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಅವಕಾಶವಿದೆ. ಆದರೆ, ಮುಖ್ಯಪರೀಕ್ಷೆಗೆ ಅರ್ಹತೆ ಪಡೆಯಲು ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣವಾಗಲೇಬೇಕು.  ಕನ್ನಡದಲ್ಲೇ ಪೂರ್ವಭಾವಿ ಪರೀಕ್ಷೆ ಬರೆಯುವ ಅವಕಾಶ ದೊರಕದ ಹೊರತು, ಮುಖ್ಯಪರೀಕ್ಷೆಯಲ್ಲಿ ಮಾತ್ರ ಕನ್ನಡ ಇದ್ದರೆ ಯಾವ ಪ್ರಯೋಜನವೂ ಆಗುವುದಿಲ್ಲ’ ಎಂದು ಶಾಸಕಿ ಸೌಮ್ಯಾ ರೆಡ್ಡಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

‘ಯುಪಿಎಸ್‌ಸಿ ಉದ್ಯೋಗಾವಕಾಶಗಳಿಂದ ದಕ್ಷಿಣ ಭಾರತೀಯರನ್ನು ಹೊರಗಿಡುವ ಈ ಹುನ್ನಾರವನ್ನು ಒಕ್ಕೊರಲಿನಿಂದ ವಿರೋಧಿಸಬೇಕು’ ಎಂದು ಅವರು ಹೇಳಿದ್ದಾರೆ.

‘ಆಯಾ ರಾಜ್ಯಗಳು ತಮ್ಮ ಆಡಳಿತಕ್ಕೆ ಬೇಕಾದ ಎಲ್ಲ ಹುದ್ದೆಗಳಿಗೆ ತಮ್ಮದೇ ರಾಜ್ಯದವರನ್ನು ಆಯ್ಕೆ ಮಾಡಿಕೊಳ್ಳುವ ವ್ಯವಸ್ಥೆ ಬೇಕಾಗಿದೆ. ಕರ್ನಾಟಕ ಲೋಕಸೇವಾ ಆಯೋಗದಿಂದಲೇ ರಾಜ್ಯದ ಐಎಎಸ್‌, ಐಪಿಎಸ್‌ ಮಟ್ಟದ ಹುದ್ದೆಗಳಿಗೆ ಕನ್ನಡಿಗರಿಗೆ ಪರೀಕ್ಷೆ ನಡೆಸಿ, ನೇಮಕ ಮಾಡಬೇಕು’ ಎಂದು ಕರ್ನಾಟಕ ರಾಷ್ಟ್ರ ಸಮಿತಿಯ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಬರೆದುಕೊಂಡಿದ್ದಾರೆ. #stophindiimposition, #kannadaQPinUpsc,  #serveInMyLanguage  #KannadaInIASPrelims ಹ್ಯಾಶ್‌ಟ್ಯಾಗ್‌ಗಳ ಮೂಲಕ ನಡೆದ ಅಭಿಯಾನದಲ್ಲಿ ಸಾವಿರಾರು ಜನ ಪ್ರತಿಕ್ರಿಯಿಸಿದರು. ಪ್ರಾದೇಶಿಕ ಭಾಷೆಗಳಲ್ಲಿ ಪ್ರಶ್ನೆಪತ್ರಿಕೆ ನೀಡಬೇಕು ಎಂದು ಒತ್ತಾಯಿಸಿದರು.

Donate Janashakthi Media

Leave a Reply

Your email address will not be published. Required fields are marked *