ಮಂಗಳೂರು: ಸುರತ್ಕಲ್ ಬಳಿ ಬರ್ಬರವಾಗಿ ಹತ್ಯೆಗೀಡಾದ ಫಾಝಿಲ್ ಅವರ ತಂದೆ ಫಾರೂಕ್ ಅವರು ಇಂದು(ಜನವರಿ 30) ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರನ್ನು ಭೇಟಿ ಮಾಡಿದ್ದು, ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ದೂರು ಸಲ್ಲಿಸಿದ್ದಾರೆ.
ಇದನ್ನು ಓದಿ: ಶರಣ್ ಪಂಪ್ ವೆಲ್ ಭಾಷಣ ಜನಾಂಗ ಹತ್ಯೆಗೆ ಪ್ರಚೋದನೆ-ಕಠಿಣ ಕಾಯ್ದೆಯಡಿ ಬಂಧಿಸಿ: ಡಿವೈಎಫ್ಐ ಆಗ್ರಹ
ಸಾರ್ವಜನಿಕ ಸಭೆಯೊಂದರಲ್ಲಿ ‘ಪ್ರವೀಣ್ ನೆಟ್ಟಾರು ಹತ್ಯೆಗೆ ಸೇಡು ತೀರಿಸಿಕೊಳ್ಳಲು ಹಿಂದೂ ಕಾರ್ಯಕರ್ತರು ಫಾಝಿಲ್ ನನ್ನು ಹತ್ಯೆ ಮಾಡಿದ್ದಾರೆ’ ಎಂದು ಹೇಳಿಕೆ ನೀಡಿದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಫಾರೂಕ್ ಆಗ್ರಹಿಸಿದ್ದಾರೆ.
ಮಗನ ಹತ್ಯೆಯ ಹಿಂದಿರುವವರನ್ನು ಪತ್ತೆ ಮಾಡುವಂತೆ ಪೊಲೀಸರಿಗೆ ಒತ್ತಾಯಿಸಿದ್ದೇನೆ ಎಂದಿರುವ ಫಾರುಕ್, ನಮಗೆ ಈ ಮೊದಲು ಅನುಮಾನವಿತ್ತು. ಆದರೆ, ಈಗ ಅವರೇ ನನ್ನ ಮಗನನ್ನು ಕೊಂದಿದ್ದಾರೆ ಎಂದು ಶರಣ್ ಪಂಪ್‌ವೆಲ್ ಹೇಳಿಕೆ ನೀಡಿರುವುದು ಮತ್ತಷ್ಟು ದೃಢಪಟ್ಟಿದೆ. ಅತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನನಗೆ ನ್ಯಾಯ ಬೇಕು ಮತ್ತು ಶರಣ್ ವಿರುದ್ಧ ಯುಎಪಿಎ ಕಾಯ್ದೆಯಡಿ ಪೊಲೀಸರು ಕ್ರಮವಹಿಸಿ ಎಂದು ದೂರು ನೀಡಿದ್ದೇನೆ ಎಂದರು.
ಇದನ್ನು ಓದಿ: ನೆಟ್ಟಾರು ಕೊಲೆಗೆ ಪ್ರತಿಕಾರವಾಗಿ ನಾವು ಫಾಜಿಲ್ ಹತ್ಯೆ ಮಾಡಿದೆವು: ವಿಎಚ್‌ಪಿ ನಾಯಕ ಶರಣ್ ಪಂಪ್‌ವೆಲ್