ಹಿರೇನಾಗವಲ್ಲಿ ಸ್ಫೋಟ ಪ್ರಕರಣ : ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ರಚನೆಗೆ ಆಗ್ರಹ

ಚಿಕ್ಕಬಳ್ಳಾಪುರ: ಹಿರೇನಾಗವಲ್ಲಿ ಸ್ಫೋಟ ಪ್ರಕರಣವನ್ನು ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿ ತನಿಖೆ ನಡೆಸಲು ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದ ಬಳಿ ಪ್ರತಿಭಟನೆಯನ್ನು ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಎನ್.‌ ಮುನಿಕೃಷ್ಣ ಮಾತನಾಡಿ, ಈ ಸ್ಫೋಟದ ಪ್ರಕರಣವನ್ನು ಸಿಬಿಐಗೆ ಕೊಡದೆ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಿ ತನಿಖೆ ನಡೆಸಬೇಕು ಅದೇ ರೀತಿಯಲ್ಲಿ ಜಿಲ್ಲಾಡಳಿತ ಬೇಜವಾಬ್ದಾರಿ ಧೋರಣೆಯಿಂದ ಈ ದುರ್ಘಟನೆ ಸಂಭವಿಸಿದ್ದು, ಅಕ್ರಮವಾಗಿ ಮೈನಿಂಗ್ ನಡೆಸುವ ಮಾಲೀಕರ ವಿರುದ್ಧ ಯಾವುದೇ ಕಾನೂನು ನಿಯಮಗಳನ್ನು ಪಾಲಿಸದೆ ಅಕ್ರಮ ಗಣಿಗಾರಿಕೆ ಕ್ಕೆ ಜಿಲ್ಲಾಡಳಿತ ವ್ಯವಸ್ಥೆಗೆ ಈ ಸ್ಪೋಟಕ್ಕೆ ಕಾರಣ ವಾಗಿದೆ. ಅದೇ ರೀತಿಯಲ್ಲಿ ಮೇಲ್ನೋಟಕ್ಕೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲು ವುದು ಕಂಡುಬಂದಿದೆ . ಹಾಗಾಗಿ ಯಾವುದೇ ಒಂದು ಜಿಲ್ಲಾಡಳಿತ ಹಾಗೂ ಮೈನಿಂಗ್ ಸಂಬಂಧಪಟ್ಟಂತ ಅಧಿಕಾರಿಗಳಿಗೆ ತನಿಖೆಯನ್ನು ಕೊಡದೆ  ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ನೇತೃತ್ವದಲ್ಲಿ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟ ದುರಂತ ; ಪ್ರಮುಖ ಆರೋಪಿ ಬಿಜೆಪಿ ಮುಖಂಡ

ಈಗ ಬಂಧನವಾಗಿರುವವರಲ್ಲಿ ಬೇನಾಮಿ ಹೆಸರು ಸೇರಿಸಲಾಗಿದೆ. ಸಚಿವ ಸುಧಾಕರ್‌ ಮತ್ತು ಗುಡಿಬಂಡೆ ನಾಗರಾಜ್‌ ಆತ್ಮೀಯ ಸ್ನೇಹಿತರು.  ಇಲ್ಲಿ ಅಕ್ರಮ ಗಣಿಗಾರಿಕೆ ನಡೆಯಲು ಬೆಂಬಲ ನೀಡಿದ್ದೆ ಸಚಿವ ಸುದಾಕಾರ್‌ ರವರು. ಜಿಲ್ಲಾಧಿಕಾರಿ ಇವರಿಬ್ಬರ ತಾಳಕ್ಕೆ ತಕ್ಕಂತೆ ಕುಣಿಯುವ ಮೂಲಕ ಕಾನೂನ್ನು ದುರ್ಭಳಕೆ ಮಾಡುತ್ತಿದ್ದಾರೆ. ಸಚಿವ ಸುಧಾಕರ್‌ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಬಿ.ಎನ್.‌ ಮುನಿಕೃಷ್ಣ ರವರು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ, ಹಳ್ಳಿ ಮಕ್ಕಳ ಸಂಘದ ರಾಜ್ಯ ಉಪಾಧ್ಯಕ್ಷ ವೆಂಕಟರಮಣಪ್ಪ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರಿದ್ದರು. ಭಾಗವಹಿಸಿದ್ದರು.

ಜನಶಕ್ತಿ ಮೀಡಿಯಾ ವಾಟ್ಸಪ್ ಸೇರಿಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ

Donate Janashakthi Media

Leave a Reply

Your email address will not be published. Required fields are marked *