ಬೆಂಗಳೂರು :ಬೆಂಗಳೂರಿನ ದೊಡ್ಡಬಳ್ಳಾಪುರದ ಬಳಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು, ಶಾಲೆಯಿಂದ ಮಗುವನ್ನು ಕರೆದುಕೊಂಡು ಬರುವಾಗ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಎಷ್ಟೇ ಕಠಿಣವಾದ ಅಂತಹ ಸಂಚಾರ ನಿಯಮಗಳನ್ನು ತಂದರು ಕೂಡ ಆಗಾಗ ಅಪಘಾತಗಳು ಸಂಭವಿಸುತ್ತವೆ. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ
ನಡೆದಿದ್ದು, ಅಪಘಾತದಲ್ಲಿ ತಾಯಿ ಸಾವನ್ನಪ್ಪಿದ್ದು, ಮಗುವಿನ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ : ಪಾದಚಾರಿಯ ಮೇಲೆ ಹರಿದ ನೀರಿನ ಟ್ರ್ಯಾಕ್ಟರ್; ಸ್ಥಳದಲ್ಲೆ ವ್ಯಕ್ತಿ ಸಾವು
ಘಟನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರವಲಯದ ನಂದಿಮೋರಿ ಬಳಿ ನಡೆದಿದ್ದು, ನಗರದ ಪಾಲನಜೋಗಹಳ್ಳಿ ನಿವಾಸಿ ಭಾನುಪ್ರಿಯ (25) ಮೃತ ದುರ್ದೈವಿ. ಮನೋಜ್ (4) ಗಂಭೀರವಾಗಿ ಗಾಯಗೊಂಡ ಮಗು ಎಂದು ತಿಳಿದುಬಂದಿದೆ. ಶಾಲೆಯಿಂದ ಮಗುವನ್ನು ಕರೆದುಕೊಂಡು ಬರುವಾಗ ಈ ಒಂದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ತಾಯಿ ಭಾನುಪ್ರಿಯ ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸಾವದಿಂದಾಗಿ ಸಾವನ್ನಪ್ಪಿದ್ದಾರೆ. ಮಗುವಿನ ತಲೆಗೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ದೊಡ್ಡಬಳ್ಳಾಪುರ ಸರ್ಕಾರಿ ಆಸ್ಮತ್ರೆಯ ಶವಾಗಾರಕ್ಕೆ ಮೃತ ದೇಹ ರವಾನಿಸಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ ಘಟನೆಯ ಬಳಿಕ ಚಾಲಕ ಪರಾರಿಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ನೋಡಿ : ನೋವು ಮೆಟ್ಟಿ ಬದುಕು ಕಟ್ಟಿಕೊಳ್ಳೊಣ – ಪಪ್ಪೆಟ್ ಜಾನು ಜೊತೆ ಮಾತುಕತೆ Janashakthi Media