ನವದೆಹಲಿ: ಜೂನ್ ಅಂತ್ಯದ ಒಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಯನ್ನು ನಡೆಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸರ್ಕಾರವು, ಜಿಬಿಎ ವ್ಯಾಪ್ತಿಯಲ್ಲಿ ಅಂತಿಮ ಮೀಸಲಾತಿ ಪ್ರಕಟಿಸಲು ಫೆಬ್ರುವರಿ 20ರ ವರೆಗೆ ಕಾಲಾವಕಾಶ ಕೇಳಿತ್ತು.
ಇದನ್ನೂ ಓದಿ: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ. ರಾಮಮೂರ್ತಿ ನೇಮಕ
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆ ಇರುವುದರಿಂದ ಮೇ ಅಂತ್ಯದಲ್ಲಿ ಚುನಾವಣಾ ಪ್ರಕ್ರಿಯೆ ಆರಂಭಿಸುವುದಾಗಿ ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರಿದ್ದ ಪೀಠವು, ಮನವಿಗೆ ಸಹಮತ ವ್ಯಕ್ತಪಡಿಸಿದೆ.
ಇದನ್ನೂ ನೋಡಿ: ರಸ್ತೆ ನಿಯಮ ಪಾಲಿಸಿ : ಅಪಘಾತಗಳನ್ನು ತಪ್ಪಿಸಿ Janashakthi Media
