ಬಿಹಾರ| ಗೃಹರಕ್ಷಕ ದಳ ನೇಮಕಾತಿ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ

ಬಿಹಾರ: ಇಂದು ಮಾರ್ಚ್ 27ರಿಂದ ಗೃಹರಕ್ಷಕ ದಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭವಾಗಿದ್ದೂ, ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅಧಿಕೃತ ವೆಬ್‌ಸೈಟ್ http://onlinebhg.bihar.gov.in ಗೆ ಭೇಟಿ ನೀಡುವ ಮೂಲಕ ಏಪ್ರಿಲ್ 16 ರವರೆಗೆ ಅರ್ಜಿ ಸಲ್ಲಿಸಬಹುದು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 15000 ಗೃಹರಕ್ಷಕ ದಳದ ನೇಮಕಾತಿಗಳು ನಡೆಯಲಿವೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ಮೋಡ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು.

ಒಟ್ಟು ಹುದ್ದೆಗಳಲ್ಲಿ, ಪಾಟ್ನಾದಲ್ಲಿ 1479, ನಳಂದದಲ್ಲಿ 812, ಭೋಜ್‌ಪುರದಲ್ಲಿ 511, ರೋಹ್ತಾಸ್‌ನಲ್ಲಿ 559, ಬಕ್ಸಾರ್‌ನಲ್ಲಿ 312, ಭಬುವಾದಲ್ಲಿ 241, ಗಯಾದಲ್ಲಿ 909 ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಬಿಹಾರ ಗೃಹರಕ್ಷಕ ದಳದ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಮತ್ತು ಆಯ್ಕೆಯಾದ ಅಭ್ಯರ್ಥಿಗೆ ಪ್ರತಿ ತಿಂಗಳು ಎಷ್ಟು ಸಂಬಳ ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಇದನ್ನೂ ಓದಿ: ಬಡವರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಆಸ್ಪತ್ರೆ ಏಮ್ಸ್ ವಶಕ್ಕೆ: ಸುಪ್ರೀಂ ಕೋರ್ಟ್

ಬಿಹಾರ ಗೃಹರಕ್ಷಕ ದಳ ನೇಮಕಾತಿಯ ಅರ್ಹತೆಗಳೇನು?

ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿದಾರರ ವಯಸ್ಸು 19 ವರ್ಷದಿಂದ 40 ವರ್ಷಗಳ ನಡುವೆ ಇರಬೇಕು.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ಮತ್ತು ಒಬಿಸಿ ವರ್ಗದವರಿಗೆ ಅರ್ಜಿ ಶುಲ್ಕ 200 ರೂ. ನಿಗದಿಪಡಿಸಲಾಗಿದೆ. ಎಸ್‌ಸಿ, ಎಸ್‌ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

  • ಅಧಿಕೃತ ವೆಬ್‌ಸೈಟ್ http://onlinebhg.bihar.gov.inಗೆ ಭೇಟಿ ನೀಡಿ.
  • ಗೃಹರಕ್ಷಕ ದಳ ನೇಮಕಾತಿ 2025 ಲಿಂಕ್ ಮೇಲೆ
  • ಈಗಲೇ ನೋಂದಾಯಿಸಿ ಮತ್ತು ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಶುಲ್ಕವನ್ನು ಪಾವತಿಸಿ.
  • ಫಾರ್ಮ್ ಅನ್ನು ಒಮ್ಮೆ ಕ್ರಾಸ್ ಚೆಕ್ ಮಾಡಿ ಮತ್ತು ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ ಏನು?

ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿದಾರರನ್ನು ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ), ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಪಿಇಟಿ ಪರೀಕ್ಷೆಯು 15 ಅಂಕಗಳಾಗಿದ್ದು, ಅದರ ಆಧಾರದ ಮೇಲೆ ಅರ್ಹತೆಯನ್ನು ನಿರ್ಧರಿಸಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ ಸುಮಾರು 20,200 ರೂ. ವೇತನ ಸಿಗಲಿದೆ.

ಇದನ್ನೂ ನೋಡಿ: ವಚನಾನುಭವ – 23 ಅನ್ನವ ನೀಡುವವರಿಂಗೆ ಧಾನ್ಯವೇ ಶಿವಲೋಕ | ಅಕ್ಕಮಹಾದೇವಿ ವಚನ Janashakthi Media

Donate Janashakthi Media

Leave a Reply

Your email address will not be published. Required fields are marked *