ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸವಲ್ಲ, ಮೇಕೆ ಮಾಂಸ: ಗೃಹ ಸಚಿವ ಜಿ.ಪರಮೇಶ್ವರ್‌

ದಾವಣಗೆರೆ : ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸವಲ್ಲ, ಅದು ಮೇಕೆ ಮಾಂಸ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವ್ಯಾಪಾರಿಯೊಬ್ಬರು ರೈಲಿನಲ್ಲಿ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ಮೇಕೆ ಮಾಂಸ ಎಂಬುದನ್ನು ಪ್ರಯೋಗಾಲಯ ದೃಢಪಡಿಸಿದೆ.

ನಾಯಿ ಮಾಂಸ ಎಂಬುದಾಗಿ ದುರುದ್ದೇಶದಿಂದ ಗಲಾಟೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಿಡಿಕಾರಿದರು.

ಇದನ್ನು ಓದಿ : ಗುತ್ತಿಗೆ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ; ಉಪವಾಸ ಹೋರಾಟ ಅಂತ್ಯ

ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ವಾರಕ್ಕೊಮ್ಮೆ ಅಥವಾ 15 ದಿನಗಳಿಗೊಮ್ಮೆ ಮಾಂಸ ಮಾರಾಟ ಮಾಡುತ್ತಾರೆ. ಅದು ನಾಯಿ ಮಾಂಸ ಅಲ್ಲ ಮೇಕೆ ಮಾಂಸ ಎಂದು ವರದಿಯಲ್ಲಿ ದೃಢವಾಗಿದೆ ಎಂದು ಸ್ಪಷ್ಟಪಡಿಸಿದರು.

ಈಚೆಗೆ ಬೆಂಗಳೂರಿನಲ್ಲಿ ಕುರಿ ಮಾಂಸದ ಜತೆಗೆ ನಾಯಿ ಮಾಂಸಗಳನ್ನು ಮಾರಾಟ ಮಾಡಲಾಗುತ್ತಿದ್ದೆ. ಹಾಗಾಗಿ ರಾಜಸ್ಥಾನದಿಂದ ಭಾರೀ ಪ್ರಮಾಣದಲ್ಲಿ ನಾಯಿಯ ಮಾಂಸವನ್ನು ರಜಾಕ್ ಸಾಗಿಸುತ್ತಿದ್ದಾನೆ ಎಂದು ಪುನೀತ್ ಕೆರೆಹಳ್ಳಿ ಗಂಭೀತ ಆರೋಪ ಮಾಡಿದ್ದರು. ಅದರಂತೆ ಮಾಂಸದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಅದು ಮೇಕೆ ಮಾಂಸ ಎಂದು ದೃಢಪಟ್ಟಿದೆ.

ಯಾರೇ ಆದರೂ ದುರುದ್ದೇಶ ಇಟ್ಟುಕೊಂಡು ಗಲಾಟೆ ಮಾಡಲು ಮುಂದಾದರೆ ಸುಮ್ಮನೆ ಕೂರಲು ಸಾಧ್ಯವಿಲ್ಲ. ಪೊಲೀಸರು ಸೂಕ್ತ ಕ್ರಮ ತೆಗೆದುಕೊಂಡಿದ್ದಾರೆ ಎಂದು ಹಿಂದುತ್ವ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಬಂಧನ ಸಮರ್ಥಿಸಿದರು.

ಇದನ್ನು ನೋಡಿ : ಶಿರೂರು ಗುಡ್ಡ ಕುಸಿತ : ಸ್ವಚ್ಚತಾ ಕಾರ್ಯದಲ್ಲಿ ತೊಡಗಿರುವ ಸಿಪಿಐಎಂ ಶಾಸಕರ, ನಾಯಕರ ಮಾದರಿ ನಡೆJanashakthi Media

Donate Janashakthi Media

Leave a Reply

Your email address will not be published. Required fields are marked *