ಎಲ್ಲ ಪಕ್ಷದ ಸಚಿವರ ಮೇಲೆ ಹನಿಟ್ರ್ಯಾಪ್: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಹನಿಟ್ರ್ಯಾಪ್ ವಿಚಾರವಾಗಿ ಸದನದಲ್ಲಿ ಸಚಿವ ಕೆ.ಎನ್. ರಾಜಣ್ಣ ಪ್ರಸ್ತಾಪ ಮಾಡಿದ್ದಾರೆ, ಆದರೆ ಎಲ್ಲ ಪಕ್ಷದ ಶಾಸಕರು ಹಾಗೂ ಸಚಿವರ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಹೇಳಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರು ಸೇರಿದಂತೆ 17 ಜನ ಶಾಸಕರು ಹಾಗೂ ಸಚಿವರ ಹನಿಟ್ರ್ಯಾಪ್ ವಿಡಿಯೋ ಇದೆ. ಮಾಧ್ಯಮಗಳಲ್ಲಿ ವಿಡಿಯೋ ಪ್ರಸಾರ ಆಗದಂತೆ ಕೋರ್ಟ್ ನಿಂದ ಪ್ರತಿಬಂಧಕಾಜ್ಞೆ ತಂದಿದ್ದಾರೆ. ಆಗ ಬಿಜೆಪಿ ಅವರೇ ಈ ರೀತಿ ಹನಿ ಟ್ರ್ಯಾಪ್ ಮಾಡಿದ್ದಾರೆ ಎಂಬ ಆರೋಪ ಬಂದಿತ್ತು ಎಂದರು.

ಇದನ್ನೂ ಓದಿ: ಬೆಂಗಳೂರು| ಗರ್ಭಕಂಠ ಕ್ಯಾನ್ಸರ್: 14 ವರ್ಷದ ಬಾಲಕಿಯರಿಗೆ ಉಚಿತ ಲಸಿಕೆ

ರಾಜಣ್ಣ ಅವರು ಇಂತಹ ಪಕ್ಷದವರೇ ಹನಿಟ್ರ್ಯಾಪ್ ಮಾಡಿದ್ದಾರೆ ಎಂದು ಎಲ್ಲಿಯೂ ಹೇಳಿಲ್ಲ. ರಾಜಣ್ಣ ದೂರು ಕೊಟ್ಟರೇ ತನಿಖೆ ಮಾಡಿಸಿ ಶಿಕ್ಷೆ ಕೊಡಿಸುತ್ತೇವೆ ಎಂದು ಉತ್ತರಿಸಿದರು.ಸರ್ಕಾರ ಬೀಳಿಸಲು ಹನಿಟ್ರ್ಯಾಪ್ ನಡೆದಿದೆ ಎಂದು ಹೇಳಲು ಸಾಧ್ಯವಿಲ್ಲ.

ಹಿಂದೆ ಬಿಜೆಪಿ ಸರ್ಕಾರದಲ್ಲೂ ಹನಿಟ್ರ್ಯಾಪ್ ನಡೆದಿದೆ. ಈಗಲೂ ಇಂತಹ ಪ್ರಯತ್ನ ನಡೆದಿದೆ. ಇದರ ಹಿಂದೆ ದೊಡ್ಡ ಜಾಲವೇ ಇದೆ. ತನಿಖೆಯ ಮೂಲಕವೇ ಜಾಲವನ್ನು ಪತ್ತೆ ಹಚ್ಚಬೇಕಿದೆ, ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು ಎಂದು ಅವರು ತಿಳಿಸಿದರು. ಹನಿ ಟ್ರ್ಯಾಪ್ ಮೂಲಕ ಬ್ಲ್ಯಾಕ್ ಮೇಲೆ ಮಾಡುವವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದರು.

ಇದನ್ನೂ ನೋಡಿ: ರಂಗಭೂಮಿ ದಿನ | ಜರ್ನಿ ಥಿಯೇಟರ್ ತಂಡದಿಂದ ರಂಗಗೀತೆಗಳು Janashakthi Media

Donate Janashakthi Media

Leave a Reply

Your email address will not be published. Required fields are marked *