ಬೆಂಗಳೂರು: ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಸತ್ಯಸಾಯಿ ವಿಶ್ವವಿದ್ಯಾಲಯದ 2ನೆ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾನ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟು ಸಮುದಾಯದ ಜನತೆಯೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವಾರು ಇಂದು ಮಧ್ಯಾಹ್ನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಇದನ್ನೂ ಓದಿ:ವಿಪಕ್ಷಗಳ ವಿರುದ್ಧ ಸುಳ್ಳು ಪ್ರಚಾರಕ್ಕೆ ಮೋದಿ ಸರ್ಕಾರದ ಆಡಳಿತ ಯಂತ್ರ ಬಳಕೆ: ರಾಷ್ಟ್ರಪತಿಗೆ ಗುಂಡೂರಾವ್ ಪತ್ರ
ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಮಯದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಬೆಂಗಳೂರು ಪ್ರಾದೇಶಿಕ ಆಯಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್, ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ , ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ.ದಯಾನಂದ್, ಬೆಂಗಳೂರು ಜಿಲ್ಲಾಧಿಕಾರಿ ಕೆ.ದಯಾನಂದ್, ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಉಪಸ್ಥಿರತಿದ್ದರು.