ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ.ಗಳ ಗೌರವಧನ: ಸಿಎಂರೊಂದಿಗೆ ಆಶಾ ಕಾರ್ಯಕರ್ತೆಯರ ಸಂಧಾನ

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದ್ದು, ಸಿಎಂ ಸಿದ್ದರಾಮಯ್ಯರೊಂದಿಗೆ ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದೆ.

ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು.ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ : ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ ಪಾವತಿಸಿ: ಹೈಕೋರ್ಟ್ ಮಹತ್ವದ ತೀರ್ಪು

ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೂಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.

ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ ನಡೆಸಲಾಗುವುದು. ಸರ್ಕಾರ ನಿಮ್ಮೊಂದಿಗಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಹೋರಾಟ ಮಾಡುವುದು ಸಂವಿಧಾನ ಬದ್ಧ ಹಕ್ಕು.ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ನೋಡಿ : ಭತ್ತ ಖರೀದಿ ಕೇಂದ್ರ ತೆರೆಯಲು ವಿಳಂಬ: ಮಂಡ್ಯದಲ್ಲಿ ಕೃಷಿ ಸಚಿವರ ಕಚೇರಿ ಎದುರು ಭತ್ತ ಸುರಿದು ಪ್ರತಿಭಟನೆ

Donate Janashakthi Media

Leave a Reply

Your email address will not be published. Required fields are marked *