ಬೆಳಗಾವಿ: ಈ ಬಾರಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನದಾಸ್ ಸೇರಿ ಮೂವರು ಮಹನೀಯರಿಗೆ ನಗರದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ ಎಂದು ವಿವಿ ಕುಲಪತಿ ಪ್ರೊ. ಸಿ ಎಂ ತ್ಯಾಗರಾಜ್ ಹೇಳಿದ್ದಾರೆ. ಜಸ್ಟೀಸ್
ಏಪ್ರಿಲ್ 11 ಶುಕ್ರವಾರದಂದು ನಗರದ ವಾರ್ತಾ ಭವನದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಏಪ್ರಿಲ್ 11ರಂದು ಬೆಳಗ್ಗೆ 11 ಗಂಟೆಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ವಹಿಸಲಿದ್ದಾರೆ ಎಂದರು. ಜಸ್ಟೀಸ್
ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ಪದ್ಮಶ್ರೀ ಪುರಸ್ಕೃತ ಪ್ರೊ.ಗಣೇಶ ನಾರಾಯಣದಾಸ್ ದೇವಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು. ಜಸ್ಟೀಸ್
ಇದನ್ನೂ ಓದಿ: ಬೆಂಗಳೂರು| ಸೈಬರ್ ಅಪರಾಧ ತಡೆಗಟ್ಟಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ
ಕೃಷಿ, ಶಿಕ್ಷಣ ಮತ್ತು ಸಾಮಾಜಿಕ ಸಾಮರಸ್ಯದಡಿ ನಿಡಸೋಸಿ ಮಠದ ಜಗದ್ಗುರು ಶಿವಲಿಂಗೇಶ್ವರ ಸ್ವಾಮೀಜಿ ಅವರಿಗೆ ಡಾಕ್ಟರ್ ಆಫ್ ಲೆಟರ್ಸ್, ಕಾನೂನು, ನ್ಯಾಯ ಮತ್ತು ಸಾಂವಿಧಾನಿಕ ಅರಿವು ಸೇವೆಯಡಿ ನಿವೃತ್ತ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನದಾಸ್ ಅವರಿಗೆ ಡಾಕ್ಟರ್ ಆಫ್ ಲಾ, ಶಿಕ್ಷಣ, ಸಹಕಾರ ಮತ್ತು ಸಾಮಾಜಿಕ ಸೇವೆಯಡಿ ವಿಜಯಪುರದ ಸೀಕ್ಯಾಬ್ ಅಧ್ಯಕ್ಷ ಶಮಸುದ್ದೀನ್ ಅಬ್ದುಲ್ಲಾ ಪುಣೇಕರ್ ಅವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರದಾನ ಮಾಡಲಾಗುವುದು ಎಂದು ಕುಲಪತಿಗಳು ತಿಳಿಸಿದರು.
ಘಟಿಕೋತ್ಸವದಲ್ಲಿ 46,013 ಸ್ನಾತಕ ಪದವಿ ಪಡೆದ ವಿದ್ಯಾರ್ಥಿಗಳು, 2866 ಸ್ನಾತಕೋತ್ತರ ವಿದ್ಯಾರ್ಥಿಗಳು ಪದವಿ ಪಡೆದಿದ್ದಾರೆ. ಇದರಲ್ಲಿ 11 ಜನ ವಿದ್ಯಾರ್ಥಿಗಳಿಗೆ ಸುವರ್ಣ ಪದಕಗಳು, ಒಂದು ನಗದು ಬಹುಮಾನವನ್ನು ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. 20 ಪಿಹೆಚ್ಡಿ ಪ್ರದಾನ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ 126 ಎಕರೆ ಪ್ರದೇಶದಲ್ಲಿ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ನಿರ್ಮಾಣದ ಕಾಮಗಾರಿ ಪ್ರಗತಿಯಲ್ಲಿದೆ. ಇದರಲ್ಲಿ 5 ಕಟ್ಟಡಗಳು ಏ.30ರಂದು ನಮಗೆ ಹಸ್ತಾಂತರ ಆಗಲಿವೆ. ಇನ್ನುಳಿದ ಕಟ್ಟಡಗಳು ಏ.30ರಂದು ನಮಗೆ ನೀಡುವಂತೆ ತಿಳಿಸಲಾಗಿದೆ. ಅಕ್ಟೋಬರ್ ತಿಂಗಳವರೆಗೆ ಹೊಸ ಕ್ಯಾಂಪಸ್ಗೆ ವಿಶ್ವವಿದ್ಯಾಲಯ ಸ್ಥಳಾಂತರ ಆಗಲಿದೆ. ಅದೇ ರೀತಿ ಪಿಎಂ ಉಷಾ ಯೋಜನೆಯಡಿ 100 ಕೋಟಿ ರೂ. ಅನುದಾನ ಮಂಜೂರಾಗಿದೆ. ಅದರಲ್ಲಿ 60 ಕೋಟಿ ರೂ. ಕಾಮಗಾರಿಗೆ ಟೆಂಡರ್ ಪೂರ್ಣಗೊಂಡಿದ್ದು, ಶೀಘ್ರವೇ ಶಂಕು ಸ್ಥಾಪನೆ ನೆರವೇರಿಸಲಿದ್ದೇವೆ ಎಂದರು.
2023ರ ಘಟಿಕೋತ್ಸವ 2024ರಲ್ಲಿ ಮಾಡಲಾಗಿತ್ತು. 2024 ಘಟಿಕೋತ್ಸವ ಈಗ ಮಾಡುತ್ತಿದ್ದು, 2025ರ ಘಟಿಕೋತ್ಸವ ಇದೇ ವರ್ಷ ನವೆಂಬರ್ನಲ್ಲಿ ನಡೆಸಲಿದ್ದೇವೆ. ಅದೇ ರೀತಿ ಶೈಕ್ಷಣಿಕ ವರ್ಷವನ್ನು ಸರಿಯಾದ ಸಮಯದಲ್ಲೇ ಆರಂಭಿಸುವ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಕಲ್ಪಿಸಲಾಗುತ್ತದೆ ಎಂದು ಕುಲಪತಿಗಳು ಸ್ಪಷ್ಟಪಡಿಸಿದರು.
ಮಾಧ್ಯಮಗೋಷ್ಟಿಯಲ್ಲಿ ಕುಲಸಚಿವ ಸಂತೋಷ ಕಾಮಗೌಡ, ಪ್ರೊ.ರವೀಂದ್ರನಾಥ ಕದಂ, ಹಣಕಾಸು ಅಧಿಕಾರಿ ಎಂ.ಎ. ಸಪ್ನಾ ಸೇರಿ ಮತ್ತಿತರರು ಇದ್ದರು.
ಇದನ್ನೂ ನೋಡಿ: ಬಾಣಂತಿಯರ ಸಾವಿನ ಹೊಣೆ ಯಾರದ್ದು? ಮೆಡಿಸಿನ್ ಮಾಫಿಯಾಗೆ ಕಡಿವಾಣ ಯಾವಾಗ?! Janashakthi Media