ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತ್ಯು, ಮೂವರಿಗೆ ಗಂಭೀರ ಗಾಯ

ಚಿತ್ರದುರ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 150A ನಲ್ಲಿ ಮಂಗಳವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ

ಇದನ್ನು ಓದಿ :ಮ್ಯಾನ್ಮಾರ್‌ನಲ್ಲಿ ಮತ್ತೊಂದು 4.2 ತೀವ್ರತೆಯ ಭೂಕಂಪ

ಅಪಘಾತದ ಸಿಸಿಟಿವಿ ದೃಶ್ಯಗಳಲ್ಲಿ, ವೇಗವಾಗಿ ಸಾಗುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಸುಮಾರು 10 ಬಾರಿ ಪಲ್ಟಿಯಾಗುವುದನ್ನು ಕಾಣಬಹುದು. ಈ ಘಟನೆಯಲ್ಲಿ ಚಾಲಕ ಮೌಲಾ ಅಬ್ದುಲ್ (35) ಮತ್ತು ಅವರ ಇಬ್ಬರು ಪುತ್ರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಈ ಕುಟುಂಬ ಯಾದಗಿರಿ ಜಿಲ್ಲೆಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.ಪೊಲೀಸರು ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ :ದಕ್ಷಿಣ ಕೊರಿಯಾದಲ್ಲಿ ಭೀಕರ ಕಾಡ್ಗಿಚ್ಚು: 24 ಮಂದಿ ಸಾವು, 27,000ಕ್ಕೂ ಹೆಚ್ಚು ಮಂದಿ ಸ್ಥಳಾಂತರ

Donate Janashakthi Media

Leave a Reply

Your email address will not be published. Required fields are marked *