ಆಸ್ಪತ್ರೆಯ ಮಹಿಳಾ ಸಿಬ್ಬಂದಿ ಬಟ್ಟೆ ಬದಲಿಸುವವಿಡಿಯೋ ಮಾಡುತ್ತಿದ್ದ ಸಿಬ್ಬಂದಿ ಬಂಧನ

ಬೆಂಗಳೂರು: ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಘಟಕದ ಡ್ರೆಸ್ಸಿಂಗ್ ರೂಂನಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಿಸುವಾಗ ರಹಸ್ಯವಾಗಿ ವಿಡಿಯೋ ಮಾಡುತ್ತಿದ್ದ ಘಟನೆ ನಗರದಲ್ಲಿ ನಡೆದಿದ್ದೂ, ಇದೀಗ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಅನ್ನಪೂರ್ಣೇಶ್ವರಿ ನಗರ ಠಾಣೆ ಪೋಲೀಸರು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಘಟಕದ ಡ್ರೆಸ್ಸಿಂಗ್ ರೂಂನಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಿಸುವಾಗ ರಹಸ್ಯವಾಗಿ ವಿಡಿಯೋ ಮಾಡುತ್ತಿದ್ದ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಬಂಡವಾಳಶಾಹಿಯ ಒಳಗೆ-ಹೊರಗೆ ಮತ್ತು ‘ಮಾನವೀಯ’ ಸಮಾಜ’ದ ನಿರ್ಮಾಣ

ನಾಗರಬಾವಿ ಹಾಸಗಿ ಆಸ್ಪತ್ರೆಯ ನಿರ್ದೇಶಕ ಡಾ. ಚೇತನ್ ನೀಡಿದ ದೂರಿನ ಆಧಾರದ ಮೇಲೆ ಆಸ್ಪತ್ರೆಯ ಜೂನಿಯರ್ ಟೆಕ್ನಿಷಿಯನ್ ಸುವೆಂದು ಮಹಾಂತ(23) ಎಂಬುವನನ್ನು ಬಂಧಿಸಲಾಗಿದೆ.

ಡಿಸೆಂಬರ್ 20ರಂದು ಬೆಳಗ್ಗೆ 8.30 ರ ಸುಮಾರಿಗೆ ಆಸ್ಪತ್ರೆಯ ಶಸ್ತ್ರಚಿಕಿತ್ಸ ಘಟಕದ ಡ್ರೆಸ್ಸಿಂಗ್ ರೂಂನಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಿಸುವಾಗ ಆರೋಪಿ ಮೊಬೈಲ್ ಫೋನ್ ಬಳಸಿಕೊಂಡು ರಹಸ್ಯವಾಗಿ ವಿಡಿಯೋ ಮಾಡುತ್ತಿದ್ದ. ಇದನ್ನು ಗಮನಿಸಿದ ಮತ್ತೊಬ್ಬ ಮಹಿಳಾ ಸಿಬ್ಬಂದಿ ಆಸ್ಪತ್ರೆಯ ಆಡಳಿತ ಮಂಡಳಿಗೆ ತಿಳಿಸಿದ್ದು, ಈ ವೇಳೆ ಆರೋಪಿ ಮೊಬೈಲ್ ಪರಿಶೀಲಿಸಿದಾಗ ರಹಸ್ಯವಾಗಿ ವಿಡಿಯೋ ಮಾಡುತ್ತಿರುವುದು ತಿಳಿದುಬಂದಿದೆ. ಸದ್ಯ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ನೋಡಿ: ‘ಮರ್ಯಾದೆಗೇಡು ಹತ್ಯೆ’ ಮರ್ಯಾದೆ ಉಳಿಸಿಕೊಳ್ಳಲಿ ಸರ್ಕಾರ!? ಕೆ.ಎಸ್.ವಿಮಲಾ, ಗುರುರಾಜ ದೇಸಾಯಿ ಮಾತುಕತೆ Janashakthi

Donate Janashakthi Media

Leave a Reply

Your email address will not be published. Required fields are marked *