ರಾಜ್ಯದಲ್ಲಿ ಬಿಸಿಲು ತೀವ್ರ: ಹೀಟ್ ಸ್ಟ್ರೋಕ್‌ಗೆ ಆಸ್ಪತ್ರೆಗಳಲ್ಲಿ ಬೆಡ್ ಮೀಸಲು

ಮಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಬೇಸಿಗೆ ಹಿನ್ನಲೆಯಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಹೀಗಾಗಿ ಎಲ್ಲಾ ಕಡೆಗೂ ಮಾರ್ಗಸೂಚಿ ನೀಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದರು. ಬಿಸಿಲು 

ಹೀಟ್ ಸ್ಟ್ರೋಕ್ ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಮೀಸಲಿಡಲಾಗಿದೆ ಇದುವರೆಗೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಆರೋಗ್ಯ ಇಲಾಖೆ ಸಚಿವ ದಿನ ಗುಂಡೂರಾವ್ ಹೇಳಿಕೆ ನೀಡಿದರು.

ಇದನ್ನೂ ಓದಿ: ಕೃಷಿ ಪರಿಕರ ಮಾರಾಟಗಾರರ ಮುಷ್ಕರ – KPRS ಬೆಂಬಲ

ನಮಲ್ಲಿ ಯಾವ ಗೊಂದಲವಿಲ್ಲ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಸಹ ಬದ್ಧರಾಗಿದ್ದೇವೆ. ಸಂಪುಟ ಪುನರಚನೆಯಾಗಿ ಬೇರೆಯವರಿಗೆ ಅವಕಾಶ ಸಿಗಬೇಕು. ಈ ಬಗ್ಗೆ ಹೈಕಮಾಂಡ್ ಮತ್ತು ಸಿಎಂ ಸಿದ್ದರಾಮಯ್ಯ ತೀರ್ಮಾನ ಕೈಗೊಳ್ಳುತ್ತಾರೆ. ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ಇದೆ ಸಂಪುಟ ರಚನೆ ಆಗಲೇಬೇಕು ಎಂದರು. ಬಿಸಿಲು 

ಇದನ್ನೂ ನೋಡಿ: ಮಹಿಳಾ ಮೀಸಲಾತಿ ಮಸೂದೆ: ಮೂರು ದಶಕಗಳ ಹೋರಾಟ – ಒಂದು ಅವಲೋಕನ Janashakthi Media

Donate Janashakthi Media

Leave a Reply

Your email address will not be published. Required fields are marked *