ರಾಣೇಬೆನ್ನೂರ: ಹಾಸ್ಟೆಲ್ ಪ್ರವೇಶ ಅರ್ಜಿ ಆಹ್ವಾನ ವಿಳಂಬ ಖಂಡಿಸಿ, ಕೂಡಲೇ ಅರ್ಜಿ ಆಹ್ವಾನಿಸಿ, ಆಯ್ಕೆ ಪಟ್ಟಿ ಬಿಡುಗಡೆ ಮಾಡಬೇಕೆಂದು ಹಾಗೂ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಗಳನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ರಾಣೇಬೆನ್ನೂರ ತಾಲ್ಲೂಕು ಸಮಿತಿ ನೇತೃತ್ವದಲ್ಲಿಂದು ವಿದ್ಯಾರ್ಥಿಗಳು ಮುನಿಸಿಪಲ್ ಮೈದಾನದಿಂದ ಬಸ್ ನಿಲ್ದಾಣದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಗಿರೀಶ್ ಹೊಸಮನಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕಾಧಿಕಾರಿ ಪ್ರಸಾದ್ ಆಲದಕಟ್ಟಿ ಅವರ ಮೂಲಕ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಎಸ್ ಮಾತನಾಡಿ, ರಾಜ್ಯದಲ್ಲಿ ಶಾಲಾ ಕಾಲೇಜುಗಳು ಪ್ರಾರಂಭವಾಗಿ ಸುಮಾರು 20 ದಿನಗಳ ಕಾಲ ಆಗುತ್ತ ಬಂದರು ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳ ಮೂಲಕ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರು ವಸತಿ ನಿಲಯಗಳಲ್ಲಿ ಸಾವಿರಾರು ಸೀಟುಗಳು ಖಾಲಿ ಇದ್ದರು ಅರ್ಜಿ ಕರೆಯದೆ ನಿರ್ಲಕ್ಷ್ಯ ಮಾಡಿರವು ಸಂಬಂಧಿಸಿದ ಇಲಾಖೆಗಳ ನೀತಿಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ತೀವ್ರವಾಗಿ ಖಂಡಿಸುತ್ತದೆ ಈ ಕೂಡಲೇ ಅರ್ಜಿ ಆಹ್ವಾನಿಸಬೇಕೆಂದು ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಎಸ್ ಆಗ್ರಹಿಸಿದರು.
ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮುಗಿಸಿಕೊಂಡು ಈಗಾಗಲೇ ಮುಂದಿನ ಶಿಕ್ಷಣಕ್ಕೆ ಹೋಗಿರುತ್ತಾರೆ ಮತ್ತು ಹೊಸ ವಿದ್ಯಾರ್ಥಿಗಳು ಈಗಾಗಲೇ 5,6,7,8,9 ನೇ ಹಾಗೂ ಪಿಯುಸಿ ತರಗತಿಗಳಿಗೆ ದಾಖಲಾತಿ ಮಾಡಿಸಿದ್ದಾರೆ ರಾಜ್ಯದ ಮತ್ತು ಜಿಲ್ಲೆಯಲ್ಲಿ ಬಹುತೇಕ ಶಾಲಾ-ಕಾಲೇಜ್ ಗಳಲ್ಲಿ ತರಗತಿಗಳು ಪ್ರಾರಂಭವಾಗಿವೆ ಹಲವಾರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ತಮ್ಮ ಮುಂದಿನ ಶಿಕ್ಷಣದ ವಸತಿಗಾಗಿ ಹಾಸ್ಟೆಲ್ ಮೇಲೆ ಅವಲಂಬಿತರಾಗಿದ್ದಾರೆ.
ಇದನ್ನು ಓದಿ : ಕಾಲೇಜು ಪೀಸ್ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ಕಳೆದುಕೊಂಡ ವಿದ್ಯಾರ್ಥಿನಿ ಆತ್ಮಹತ್ಯೆ
ಕಳೆದ ವರ್ಷ ಮೆಟ್ರಿಕ್ ಪೂರ್ವ ವಸತಿ ನಿಲಯಗಳಿಗೆ ಮೇ ತಿಂಗಳಲ್ಲಿ ಅರ್ಜಿ ಆಹ್ವಾನ ಮಾಡಿ ಜೂನ್ ತಿಂಗಳ 10 ನೇ ದಿನಾಂಕ ಒಳಗಡೆ ಅರ್ಜಿ ತೆಗೆದುಕೊಂಡು ಅರ್ಜಿ ಪ್ರಕ್ರಿಯೆ ಮುಗಿಸಿದ್ದರು ಆದರೆ ಈ ಶೈಕ್ಷಣಿಕ ವರ್ಷ ಜೂನ್ 18 ಮುಗಿದರು ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಹೋಸ ಪ್ರವೇಶಕ್ಕೆ ಅರ್ಜಿ ಕರೆಯದು ನಿರ್ಲಕ್ಷ್ಯ ಮಾಡುತ್ತಿರುವುದನ್ನು ಗಮನಿಸಿದರೆ ಸರಕಾರ ಗ್ರಾಮೀಣ ಪ್ರದೇಶದ ಬಡ, ದಲಿತ,ಹಿಂದುಳಿದ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಆದ್ಯತೆ ನೀಡದೆ ಇರವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಮತ್ತು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿರುವುದು ಸರಿಯಲ್ಲ ಸಚಿವರು ಈ ಕೂಡಲೇ ಗಮನ ಹರಿಸಬೇಕು ಇಲ್ಲದಿದ್ದಲ್ಲಿ ರಾಜ್ಯಾದಂತ ಹೋರಾಟಕ್ಕೆ ಮುಂದಾಗ ಬೇಕಾಗುತ್ತದೆ ಎಂದರು.
ಎಸ್ಎಫ್ಐ ತಾಲ್ಲೂಕು ಅಧ್ಯಕ್ಷ ಶ್ರೀಧರ ಸಿ ಮಾತನಾಡಿ, ವಿದ್ಯಾರ್ಥಿಗಳು ಶಾಲಾ ಕಾಲೇಜಿನ ತರಗತಿಗೆ ಹಾಜರಾಗಬೇಕೆಂದರೆ ಜಿಲ್ಲೆಯಲ್ಲಿ ಸಮಯಕ್ಕೆ ಬಸ್ ಸೌಲಭ್ಯಗಳು ಇಲ್ಲ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳು ಹಾಸ್ಟೆಲ್ ಗೆ ಅರ್ಜಿ ಹಾಕಲು ದಿನ್ಯನಿತ್ಯ ಕಂಪ್ಯೂಟರ್ ಸೆಂಟರ್ ಗಳಿಗೆ ಅಲೆದಾಡುತ್ತ ಇದ್ದರೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಎಲ್ಲಾ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಿ ಏಕೆಂದರೆ ಇನ್ನೂ ವಿಳಂಬ ಮಾಡಿದರೆ ಅರ್ಜಿ ಪ್ರಕ್ರಿಯೆ ಪ್ರಾರಂಭ ಮಾಡಿ ಮುಗಿವದರ ಒಳಗೆ ಅಗಸ್ಟ್ ತಿಂಗಳ ಬಂದು ಬಿಡುತ್ತದೆ ಶಾಲಾ-ಕಾಲೇಜ್ ಪ್ರಾರಂಭವಾದ ತಕ್ಷಣ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಕರೆದ ರಾಜ್ಯದ ಹಾಗೂ ಜಿಲ್ಲೆಯ ಎಲ್ಲಾ ಬಡ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿ ಶಿಕ್ಷಣಕ್ಕೆ ಆದ್ಯತೆ ಕೊಡಲು ಸರಕಾರ ಶ್ರಮವಹಿಸಲಿ ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ತಾಲ್ಲೂಕು ಉಪಾಧ್ಯಕ್ಷ ನೇಹಾಲ್ ಖಾನ್ ಗಂಗಾವತಿ, ಮುಖಂಡರಾದ ಗೌತಮ್ ಸಾವಕ್ಕನವರ, ಅಭಿಶೇಕ್ ಕುಸಗೂರ, ಪವಿತ್ರ ಎಚ್ ಕೆ, ನಾಗರತ್ನ ಬಿ ಎಸ್, ಭವ್ಯ ಆರ್ ಕೆ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಇದನ್ನು ನೋಡಿ : ಅಂಗನವಾಡಿ ಕಾರ್ಯಕರ್ತರು ಪಿಯುಸಿ, ಪದವಿ ಮುಗ್ಸಿದ್ದಾರೆ, Janashakthi Media