ಹಾವೇರಿ: ನಗರದ ಎಲ್ಐಸಿ ಬಸ್ ನಿಲ್ದಾಣದಿಂದ ವಾಲ್ಮೀಕಿ ವೃತ್ತದವರೆಗೆ ಬೃಹತ್ ಮೆರವಣಿಗೆ ನಡೆಸಿ ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ 19 ವರ್ಷದ ವರ್ಷಿತಾ ಎಂಬ ಹಾಸ್ಟೆಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ ಮಾಡಿ ಬೆಂಕಿ ಹಚ್ಚಿ ಸುಟ್ಟು ಹಾಕಿರುವುದನ್ನು ಖಂಡಿಸಿ, ತಪ್ಪಿತಸ್ಥ ಆರೋಪಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ಚಿತ್ರದುರ್ಗದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲದಲ್ಲಿ ದ್ವಿತೀಯ ವರ್ಷದ ಬಿಎ ಪದವಿ ವಿದ್ಯಾಭ್ಯಾಸ ಮಾಡುತ್ತಿದ 19 ವರ್ಷದ ವರ್ಷಿತಾ ಎಂಬ ಹಾಸ್ಟೆಲ್ ವಿದ್ಯಾರ್ಥಿನಿ ರಾಷ್ಟ್ರೀಯ ಹೆದ್ದಾರಿ ಬಳಿ ಮನೆಗೆ ಹೋಗುವಾಗ ಅಪಹರಿಸಿ,ಕೊಲೆ ಮಾಡಿ ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ತೀವ್ರವಾಗಿ ಖಂಡಿಸುತ್ತದೆ.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, ವಿದ್ಯಾಭ್ಯಾಸ ಮುಗಿಸಿ ಸುರಕ್ಷಿತವಾಗಿ ಮನೆಗೆ ತಲುಪಬೇಕಾದ ಹಾಸ್ಟೆಲ್ ವಿದ್ಯಾರ್ಥಿನಿಯನ್ನು ಕ್ರೂರವಾಗಿ ಕೊಲ್ಲಲಾಗಿದಲ್ಲದೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದ್ದು ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ ಬಳಿ ಈ ಘಟನೆ ನಡೆದಿರುವುದು ಘನಘೋರ ದುರಂತವಾಗಿದೆ.
ಇದನ್ನೂ ಓದಿ: ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಅಂಗೀಕರ
ಕಳೆದ ಎರಡು ದಿನಗಳಿಂದ ವಿದ್ಯಾರ್ಥಿನಿಯು ಕಾಣೆಯಾಗಿದ್ದು ಅರೆಬೇರೆ ಬೆಂದ ಸುಟ್ಟ ಸ್ಥಿತಿಯಲ್ಲಿ ಆತ್ಯಾಚಾರ ಎಸಿಗೆ ಕೊಲೆ ಮಾಡಿರುವ ಅನುಮಾದ ರೀತಿಯಲ್ಲಿ ಮೃತ ದೇಹ ಪತ್ತೆಯಾಗಿದ್ದು ಕೂಡಲೇ ಈ ಘಟನೆ ಬಗ್ಗೆ ಸೂಕ್ತ ತನಿಖೆ ಆಗಬೇಕು ಮತ್ತು ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಎಸ್ಎಫ್ಐ ಒತ್ತಾಯಿಸುತ್ತದೆ.
ವಿದ್ಯಾರ್ಥಿನಿಯರು ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ, ಕೊಲೆ, ಸುಲಿಗೆಗಳನ್ನು ತಡೆಯುವಲ್ಲಿ ಹಾಗೂ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಸ್ವಾತಂತ್ರ್ಯ ಸಿಕ್ಕು 78ನೇ ಸಂಭ್ರಮಾಚರಣೆಯಲ್ಲಿದರು ಇವತ್ತು ಮಹಿಳೆಯರಿಗೆ ವಿದ್ಯಾರ್ಥಿನಿಯರಿಗೆ ಸ್ವಾತಂತ್ರ್ಯವಾಗಿ, ಭಯಬಿತ್ತಿಯಿಂದ ಮುಕ್ತವಾಗಿ, ಒಬ್ಬಂಟಿಯಾಗಿ ಓಡಾಡುವ ಸುರಕ್ಷಿತ ಸ್ಥಳ ಇಲ್ಲದೆರುವುದು ನಮ್ಮ ದೇಶದ ದುರಂತವಾಗಿದೆ. ಕೂಡಲೇ ತಪ್ಪಿತಸ್ಥ ಆರೋಪಗಳನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಕಾಲೇಜ್ ಘಟಕ ಕಾರ್ಯದರ್ಶಿ ಗಂಗಾ ಯಲ್ಲಾಪುರ ಮಾತನಾಡಿ, ಬೇಟಿ ಬಚಾವೋ, ಬೇಟಿ ಪಢಾವೋ ಎಂಬ ಹೆಸರು ‘ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಗುವಿಗೆ ಶಿಕ್ಷಣ ನೀಡಿ’ ಎಂದು ಹೇಳುತ್ತಾರೆ ಆದರೆ ಓದಿಸುವುದು ಅಷ್ಟೇ ಅಲ್ಲ ಕಾಪಾಡುವುದು ನಿಮ್ಮ ಕರ್ತವ್ಯವಾಗಬೇಕು. ನಿಮ್ಮ ಮನೆಯ ಹೆಣ್ಣಿನ ಸ್ಥಾನದಲ್ಲಿ ಎಲ್ಲರನ್ನು ನೋಡಬೇಕು. ಇಂತಹ ಅನ್ಯಾಯವು ತಂದೆ ತಾಯಿಗಳಿಗೆ ಗಾಯದ ಮೇಲೆ ಬೆರೆ ಎಳೆದಂತೆ ಆಗಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಿ ವಿದ್ಯಾರ್ಥಿನಿಯರಿಗೆ ನ್ಯಾಯ ಒದಗಿಸಲು ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿನಿ ಪ್ರೇಮಾ ಪೂಜಾರ ಮಾತನಾಡಿ, ಚಾಕೊಲೇಟ್ ನೀಡಿ ಎಳೆ ಮಕ್ಕಳಿಂದ ಹಿಡಿದು ವಯಸ್ಸಾದ ಮಹಿಳೆಯರ ಮೇಲೆ ನಿರಂತರವಾಗಿ ಅತ್ಯಾಚಾರಗಳ ಕೊಲೆ ಮಾಡುತ್ತಿರುವ ಸುದ್ದಿ ಕೇಳಿ ವಿದ್ಯಾರ್ಥಿನಿಯರು ಹಾಗೂ ಪಾಲಕರು ಭಯಬಿತ್ತರಾಗಿದ್ದಾರೆ ಸರ್ಕಾರಗಳು ಈ ಘಟನೆಗಳು ಮರುಕಳಿಸದಂತೆ ಕ್ರಮಕೈಗೊಳಬೇಕು. ಹಾಸ್ಟೆಲ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ವೇಸಗಿದ ಆರೋಪಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.
ಎಸ್ಎಫ್ಐ ಮುಖಂಡ ಅರುಣ್ ನಾಗವತ್ ಮಾತನಾಡಿ, ಚಿತ್ರದುರ್ಗದ ಹಾಸ್ಟೆಲ್ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಆರೋಪಿಯನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕು ಹಾಗೂ ನಿರಂತರವಾಗಿ ನಡೆಯುತ್ತಿರುವ ವಿದ್ಯಾರ್ಥಿನಿಯರು ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ, ಕೊಲೆಗಳನ್ನು ಸರ್ಕಾರಗಳು ತಡೆಗಟ್ಟಲು ಮುಂದಾಗಬೇಕು. ಒಂದು ವೇಳೆ ಸರ್ಕಾರ ಸರಿಯಾದ ಸೂಕ್ತ ರಕ್ಷಣೆ, ನ್ಯಾಯ ನೀಡಲು ಮುಂದಾಗದಿದರೆ ಮುಂದಿನ ದಿನಗಳಲ್ಲಿ ಶಾಲಾ-ಕಾಲೇಜ್ ಬಂದ್ ಮಾಡಿ ಭಾರಿ ಪ್ರಮಾಣದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬೇಡಿಕೆಗಳು:
* ಚಿತ್ರದುರ್ಗದ ಹಾಸ್ಟೆಲ್ ವಿದ್ಯಾರ್ಥಿನಿ ವರ್ಷಿತಾ ಆತ್ಯಾಚಾರ, ಸಾವಿನ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕು.
* ನಗರದ ಹೊರ ವಲಯದಲ್ಲಿರುವ ಶಾಲಾ ಕಾಲೇಜು ವಿವಿ ಹಾಗೂ ವಿದ್ಯಾರ್ಥಿ ವಸತಿ ನಿಲಯಗಳಿಗೆ ಬೀಟ್ ಪೋಲಿಸ್ ರನ್ನು ನೇಮಿಸಬೇಕು.
* ನಗರದ ಹೊರವಲಯ ಹಾಗೂ ನಗರದಲ್ಲಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ದುರಸ್ತಿಯಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಬದಲಾಯಿಸಿ ಹೊಸ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು.
* ಶಾಲಾ-ಕಾಲೇಜು ಹಾಗೂ ಮಹಿಳೆಯರು ಕೆಲಸ ಮಾಡುವಂತಹ ಪದೇಶಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿಯನ್ನು ರಚನೆ ಮಾಡಬೇಕು.
* ಪ್ರೋ ವರ್ಮಾ ಸಮಿತಿಯ ಶಿಪಾರಸುಗಳನ್ನು ಜಾರಿ ಮಾಡಬೇಕು.
ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡ ಫಕೀರೆಶ್ ಮ್ಯಾಗಳಮನಿ, ಸುನಿಲ್ ಕುಮಾರ್ ಎಲ್, ಧನುಷ್ ದೊಡ್ಡಮನಿ, ಸುದೀಪ್ ಲಮಾಣಿ, ಉಷಾ, ಲಕ್ಷ್ಮಿ ಹೊಲ್ಲೂರು, ದೀಪ ಕುಲಕರ್ಣಿ, ಸುಶ್ಮಿತಾ ಕೆ, ಹೊನ್ನಮ್ಮ ಎಮ್, ಚಂದನ ಬಿ, ವೀಣಾ, ಪ್ರತಿಭಾ ಮಾದರ್, ಭೂಮಿಕಾ ಎಂ, ಜಯಶ್ರೀ, ಅಪೇಕ್ಷ ಕಿತ್ತೂರು, ಭೂಮಿಕಾ ಪಿ ಜಿ, ದ್ರಾಕ್ಷಾಯಿಣಿ ಶಿರೂರು, ಐಶ್ವರ್ಯ, ಸಂಗೀತ, ಸಂಜನ, ಅನು ಸಿ, ಸಹನ ಎಸ್, ಅಕ್ಷತಾ ಎಮ್, ಕಾವೇರಿ ಹೆಚ್, ನವೀನ್ ಲಮಾಣಿ, ತುಕಾರಾಂ ಲಮಾಣಿ, ಕಿರಣ್ ಲಮಾಣಿ ಸೇರಿದಂತೆ ಅನೇಕ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಇದನ್ನೂ ನೋಡಿ: ‘ಎಡಿಟೆಡ್ ವಿಡಿಯೋ’ ಬಗ್ಗೆ ಘನಘೋರ ಚರ್ಚೆ ನಾಚಿಗೆಗೇಡು | ‘ಹರೀಶ್ ಪೂಂಜಾರನ್ನು ಅಮಾನತು ಮಾಡಿ’ – ನವೀನ್ ಸೂರಿಂಜೆ
