ಬಡವರಿಗೆ ನಿವೇಶನ: ತಿಂಗಳಾಂತ್ಯದೊಳಗೆ ಭೂಮಿ ಗುರುತಿಸಿ – ಪರಮೇಶ್ವರ್

ಬೆಂಗಳೂರು: ಬಡವರಿಗೆ ನಿವೇಶನ ಒದಗಿಸುವ ಸರ್ಕಾರದ ಯೋಜನೆಗೆ ಅಗತ್ಯವಿರುವ ಸರ್ಕಾರಿ ಭೂಮಿಯನ್ನು ಗುರುತಿಸುವ ಕಾರ್ಯವನ್ನು ಸೆಪ್ಟೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ. ಪರಮೇಶ್ವರ್‌ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಡವರಿಗೆ 

ವಿಧಾನಸೌಧದಲ್ಲಿ ಬುಧವಾರ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲಿಸಿದ ಅವರು, ಬಡವರಿಗೆ ನಿವೇಶನ ನೀಡುವ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೀಗಾಗಿ ಯೋಜನೆಯ ಅನುಷ್ಠಾನದಲ್ಲಿ ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ಸೂಚಿಸಿದರು. ಕೆಲವು ಜಿಲ್ಲೆಗಳಲ್ಲಿ ನಿವೇಶನಕ್ಕಾಗಿ ಅಗತ್ಯ ಭೂಮಿ ಗುರುತಿಸುವ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಅಂತಹ ಜಿಲ್ಲೆಗಳಲ್ಲಿ ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ತಿಂಗಳಾಂತ್ಯದೊಳಗೆ ಮುಗಿಸಿ ಮುಂದಿನ ಹಂತದ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ನಿವೇಶನಗಳ ಅಭಿವೃದ್ಧಿ ಹಾಗೂ ಭೂಮಿ ಗುರುತಿಸುವ ಕಾರ್ಯದಲ್ಲಿ ಜಿಲ್ಲಾಡಳಿತಕ್ಕೆ ಅಗತ್ಯ ತಾಂತ್ರಿಕ ನೆರವನ್ನು ಹಿರಿಯ ಅಧಿಕಾರಿಗಳು ನೀಡಲಿದ್ದಾರೆ ಎಂದು ಪರಮೇಶ್ವರ್‌ ತಿಳಿಸಿದರು. ಯೋಜನೆಯ ಅನುಷ್ಠಾನದಲ್ಲಿ ಯಾವುದೇ ಹಂತದಲ್ಲೂ ವಿಳಂಬವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಬಡವರಿಗೆ 

ಇದನ್ನೂ ಓದಿ : ಎಸ್‌ಐಆರ್‌ನಲ್ಲಿ ಆಧಾರ್‌ ಸ್ವೀಕಾರದ ಗೊಂದಲ | ಮತದಾರರಿಗೆ ಹೆಚ್ಚಿದ ಆತಂಕ

ಇದೇ ವೇಳೆ ‘ಭಾರತ್‌ ಜೋಡೋ ಯುವ ಸಂಘ’ಗಳ ನೋಂದಣಿ ಪ್ರಕ್ರಿಯೆಯನ್ನೂ ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಾಂತ್ರಿಕ ಸಮಸ್ಯೆಯಿಂದಾಗಿ ಕೆಲವು ಹಂತಗಳಲ್ಲಿ ಪ್ರಕ್ರಿಯೆ ಸ್ಥಗಿತಗೊಂಡಿದ್ದರೆ, ಅದನ್ನು ಪರಿಹರಿಸಿ ಅರ್ಜಿ ನಮೂನೆಗಳನ್ನು ವಿತರಿಸಿ ನೋಂದಣಿ ಕಾರ್ಯ ಮುಂದುವರಿಸಬೇಕು. ಸಂಘಗಳ ನೋಂದಣಿ ಜತೆಗೆ ಮೆಂಟರ್‌ಗಳ ನೇಮಕ ಸೇರಿದಂತೆ ಸಂಘಗಳ ಆರಂಭಕ್ಕೆ ಅಗತ್ಯ ಕ್ರಮಗಳನ್ನು ವೇಗವಾಗಿ ಕೈಗೊಳ್ಳಬೇಕು ಎಂದು ಹೇಳಿದರು.

ಪ್ರಜಾಸೇವಾ ಅಭಿಯಾನದ ಮೂಲಕ ಸಾರ್ವಜನಿಕರಿಂದ ಸಲ್ಲಿಕೆಯಾಗುತ್ತಿರುವ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳನ್ನೂ ತ್ವರಿತವಾಗಿ ವಿಲೇವಾರಿ ಮಾಡುವಂತೆ ಪರಮೇಶ್ವರ್‌ ಸೂಚಿಸಿದರು. ವಿಶೇಷವಾಗಿ ಪಹಣಿ ತಿದ್ದುಪಡಿ, ಪೋಡಿ, ಪಿಂಚಣಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ವಿಳಂಬ ಮಾಡದೆ ಇತ್ಯರ್ಥಗೊಳಿಸಬೇಕು ಎಂದು ಹೇಳಿದರು.

ಆರ್‌ಟಿಸಿ ಹಾಗೂ ಪೋಡಿ ಪ್ರಕರಣಗಳ ವಿಲೇವಾರಿ ಪ್ರಕ್ರಿಯೆಯನ್ನು ಈಗಾಗಲೇ ಸರಳಗೊಳಿಸಲಾಗಿದ್ದು, ಆದರೂ ಸ್ಥಳೀಯ ಮಟ್ಟದಲ್ಲಿ ಯಾವುದೇ ಗೊಂದಲ ಉಂಟಾದರೆ ಹಿರಿಯ ಅಧಿಕಾರಿಗಳ ಸಲಹೆ ಪಡೆದು ಸಮಸ್ಯೆ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ, ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಮನೋಜ್‌ ಕುಮಾರ್‌ ಮೀನಾ, ಕಂದಾಯ ಆಯುಕ್ತೆ ಮೀನಾ ನಾಗರಾಜ್‌, ಭೂಮಾಪನ ಮತ್ತು ಭೂದಾಖಲೆಗಳ ಇಲಾಖೆಯ ಆಯುಕ್ತ ವೆಂಕಟರಾಜ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ನೋಡಿ : ಕಸ್ತೂರಿ ರಂಗನ್ ವರದಿಯಿಂದ ಜನರ ಬದುಕಿಗೆ ಕುತ್ತೇ? | ಸಿಪಿಐ(ಎಂ) ಕೊಟ್ಟ ಎಚ್ಚರಿಕೆಗಳೇನು? Janashakthi Media

Donate Janashakthi Media

Leave a Reply

Your email address will not be published. Required fields are marked *