ಬೆಂಗಳೂರು: ಬೆಂಗಳೂರಿನಲ್ಲಿ ಡೆಂಗ್ಯೂ ಪತ್ತೆಗೆ ಬಿಬಿಎಂಪಿ ಮುಂದಾಗಿದೆ. ಸೋಂಕಿತರ ಪತ್ತೆ ಮಾಡಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಜ್ಜಾಗಿದೆ. ಡೆಂಗ್ಯೂ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘಿ ಪ್ರಕರಣ ನಿಯಂತ್ರಿಸುವ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಲಾಯಿತು.
ಇದನ್ನೂ ಓದಿ: ಅಶ್ಲೀಲ ವಿಡೀಯೋಗಳ ಪೆನ್ಡ್ರೈವ್ ಗಳನ್ನು ಯಾರು ಹಂಚಿದ್ದಾರೆಂದು ಗೊತ್ತಿದೆ : ಪರಮೇಶ್ವರ್ ಮಾರ್ಮಿಕ ಹೇಳಿಕೆ
ಆಯಾ ವಲಯ ವ್ಯಾಪ್ತಿಯಲ್ಲಿ ಆರೋಗ್ಯ ಪರಿವೀಕ್ಷರು ಮತ್ತು ಆಶಾ ಕಾರ್ಯಕರ್ತೆಯರು 1000 ಮನೆಗಳಿಗೊಂದು ಬ್ಲಾಕ್ ಅನ್ನು ರಚಿಸಿಕೊಳ್ಳಬೇಕು. ನಾಗರಿಕರಲ್ಲಿ ಅರಿವು ಮೂಡಿಸುವುದು ಹಾಗೂ ಯಾರಿಗಾದರು ಜ್ವರ ಬಂದಿದ್ದಲ್ಲಿ ಅಂತವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಮಾಡಿಸಕೊಳ್ಳಲು ತಿಳಿಸಬೇಕು ಎಂದು ಹೇಳಿದರು.
ಈಡಿಸ್ ಈಜಿಪ್ಟೈ ಎಂಬ ಸೊಳ್ಳೆಗಳಿಂದ ಡೆಂಘೀ ಹರಡುತ್ತದೆ. ಈ ನಿಟ್ಟಿನಲ್ಲಿ ಸೊಳ್ಳೆ ನಿಯಂತ್ರಣ ಮಾಡಲು ಲಾರ್ವಾ ಉತ್ಪಿತ್ತಿಯಾಗುವ ತಾಣಗಳನ್ನು ಗುರುತಿಸಿ ನಾಶಪಡಿಸಲು ಅಧಿಕಾರಿಗಳಿಗೆ ಗಿರಿನಾಥ್ ಸೂಚನೆ ನೀಡಿದ್ದು,ನಗರದಲ್ಲಿ 2024 ಜನವರಿಯಿಂದ ಜೂನ್‌ವರೆಗೆ 1230 ಪ್ರಕರಣಗಳು ಕಂಡುಬಂದಿದ್ದು, ವಲಯವಾರು ಮೈಕ್ರೋ ಪ್ಲಾನ್ ಮಾಡಿಕೊಂಡು ಡೆಂಘಿ ಹರಡುವಿಕೆಯನ್ನು ನಿಯಂತ್ರಿಸಬೇಕೆಂದು ತುಷಾರ್ ಗಿರಿನಾಥ್ ತಿಳಿಸಿದರು.
ಇದನ್ನೂ ನೋಡಿ: ಅಂಗನವಾಡಿಗಳ ಕತ್ತು ಹಿಸುಕಬೇಡಿ – ಕಾರ್ಯಕರ್ತರನ್ನು ತರಬೇತಿಗೊಳಿಸಿ Janashakthi Media