ದಾವಣಗೆರೆ: ಕಳೆದ ಮೂರು ದಿನಗಳಿಂದ ನಿರಂತರ ಮಳೆಯಿಂದಾಗಿ ಮನೆಗೋಡೆ ಕುಸಿದು ಬಿದ್ದು ಒಂದು ವರ್ಷದ ಹೆಣ್ಣು ಮಗು ಸ್ಫೂರ್ತಿ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ:ಉತ್ತರ ಪ್ರದೇಶ: ಭಾರೀ ಮಳೆಯಿಂದ 24 ಗಂಟೆಯಲ್ಲಿ 36 ಮಂದಿ ಸಾವು
ಇನ್ನು ಸ್ಫೂರ್ತಿ ತಂದೆ ಕೆಂಚಪ್ಪಗೆ ಗಾಯವಾಗಿದ್ದು, ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಅವರು ಅಪಾಯದಿಂದ ಪಾರಾಗಿದ್ದಾರೆ. ಗ್ರಾಮದ ಕೆಂಚಪ್ಪ ಹಾಗೂ ಲಕ್ಷ್ಮಿದೇವಿ ಅವರ ಪುತ್ರಿ ಸ್ಪೂರ್ತಿ ಮೃತಪಟ್ಟ ಮಗು. ನಿರಂತರ ಮಳೆಯಿಂದಾಗಿ ಮನೆಯ ಗೋಡೆ ಶಿಥಿಲಗೊಂಡಿತ್ತು.
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಎಡಬಿಡದೆ ನಿರಂತರ ಜಡಿ ಮಳೆ ಹಿನ್ನೆಲೆಯಲ್ಲಿ ಮನೆ ಸಂಪೂರ್ಣವಾಗಿ ಸಂಪೂರ್ಣವಾಗಿ ಹಾಳಾಗಿದ್ದು, ನಿನ್ನೆ ಜುಲೈ-24 ರಾತ್ರಿ ವೇಳೆ ಮಲಗಿದ್ದ ಸಂದರ್ಭದಲ್ಲಿ ಮನೆಗೋಡೆ ಕುಸಿದಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಹಾಗೂ ಪೋಲಿಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.