ಬೆಂಗಳೂರು: 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ. ಮಾರ್ಚ್ 18ರಿಂದ ಏಪ್ರಿಲ್ 2 ರವರೆಗೆ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಬಾರಿ ಶೇಕಡ 90ರಷ್ಟು ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಫಲಿತಾಂಶ ರವನಿಸಲಾಗುತ್ತದೆ.
ಈ ವರ್ಷ ಮಂಡಳಿಯು ಪ್ರಥಮ ಬಾರಿಗೆ ವಿಶೇಷ ಹೆಜ್ಜೆಯೊಂದನ್ನು ಇಟ್ಟಿದ್ದು, ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ತಕ್ಷಣವೇ ‘ಡಿಜಿಲಾಕರ್’ನಲ್ಲಿ ಲಭ್ಯವಾಗುವಂತೆ ಮಾಡಿದೆ.
ಇದನ್ನೂ ಓದಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನ ವೇಳೆ ಬಾಂಬ್ ದಾಳಿ!
ಮಧ್ಯಾಹ್ನ 12 ಕ್ಕೆ ಅಂಕಪಟ್ಟಿ ಲಭ್ಯ
ವಿದ್ಯಾರ್ಥಿಗಳು ಮಧ್ಯಾಹ್ನ 12 ಗಂಟೆಯ ನಂತರ https://www.digilocker.gov.in ವೆಬ್ಸೈಟ್ಗೆ ಭೇಟಿ ನೀಡಿ ತಮ್ಮ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
ಹಿಂದಿ ಸೇರಿ ತೃತೀಯ ಭಾಷೆಗೆ ಅಂಕ ಅಥವಾ ಗ್ರೇಡ್?
ಪ್ರಸಕ್ತ ವರ್ಷದಿಂದಲೇ ಹಿಂದಿ ಸೇರಿ ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡಲು ಶಿಕ್ಷಣ ಇಲಾಖೆ ಮುಂದಾಗಿತ್ತು. ಈ ಬಗ್ಗೆ ಹೈಕೋರ್ಟ್ನಿಂದ ತಡೆ ನೀಡಿದ್ದು, ಗ್ರೇಡ್ ಬೇಡ ಅಂಕ ನೀಡಲು ಆದೇಶಿಸಲಾಗಿತ್ತು. ಹೀಗಾಗಿ, ಈ ವರ್ಷ ಅಂಕ ನೀಡಲಾಗುತ್ತಿದೆ.
625 ಅಂಕಗಳಿಗೆ ಫಲಿತಾಂಶ ಪ್ರಕಟವಾಗಲಿದೆ. ತೃತೀಯ ಭಾಷೆ ಪಾಸ್ ಆಗುವುದ ಕಡ್ಡಾಯವಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ನಿಯಮವನ್ನು ಜಾರಿಗೆ ತರುವ ಸಾಧ್ಯತೆ ಇದೆ.
ಇದನ್ನೂ ನೋಡಿ: ಡಿಲಿಮಿಟೇಶನ್ ಎನ್ನುವ ಟಿಕ್ ಟಿಕ್ ಬಾಂಬ್.. ಇದು ಸ್ಪೋಟಿಸುವುದೇ? Janashakthi Media
