ಚಾರ್ಮಾಡಿ ಘಾಟ್‌ ಅರಣ್ಯ ಪ್ರದೇಶದಲ್ಲಿ ಬೆಂಕಿ; ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಜನವರಿ 18ರಂದು ಚಾರ್ಮಾಡಿ ಘಾಟ್‌ ಸಮೀಪದ ಮಲಯ ಮಾರುತದ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿರುವ ಜೊತೆಗೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿರುವ ಪ್ರಾಣಿ-ಪಕ್ಷಿಗಳ ಮೃತಪಟ್ಟಿರುವ ಶಂಕೆ ಇದೆ.

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ ಸಮೀಪದ ಮಲಯ ಮಾರುತ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು ಬೆಂಕಿ ನಂದಿಸಲು ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

ಅರಣ್ಯಕ್ಕೆ ಬೆಂಕಿ ಬಿದ್ದಿರುವುದರಿಂದ ಭಾರಿ ಪ್ರಮಾಣದಲ್ಲಿ ಒಣಗಿ ಬಿದ್ದಿದ್ದ ಎಲೆಗಳಿಂದ ಅರಣ್ಯ ಪ್ರದೇಶ ಬೆಂಕಿಗಾಹುತಿ ಆಗಿದೆ. ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತಲು ನಿಖರವಾದ ಕಾರಣ ತಿಳಿದು ಬಂದಿಲ್ಲ.

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನ ಸಮೀಪದ ಮಲಯ ಮಾರುತ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು ಬೆಂಕಿ ನಂದಿಸಲು ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

ಇದನ್ನೂ ನೋಡಿ: ಉತ್ತರ ಪ್ರದೇಶ | ಮತದಾರರ “ಪರಿಷ್ಕರಣೆಯೋ? ಹರಣವೋ? | ಗುರುರಾಜ ದೇಸಾಯಿ| Janashakthi Media #upsir

Donate Janashakthi Media

Leave a Reply

Your email address will not be published. Required fields are marked *