ಮಂಗಳೂರಿನಲ್ಲಿ ಬೃಹತ್‌ ಡ್ರಗ್‌ ಜಾಲ: ಬರೋಬ್ಬರಿ ಆರು ಕೋಟಿ ರೂ ಮೌಲ್ಯದ ಡ್ರಗ್ ವಶ

ಮಂಗಳೂರು: ಬೃಹತ್‌ ಡ್ರಗ್‌ ಜಾಲವೊಂದನ್ನು ಮಂಗಳೂರಿನ ಸಿಸಿಬಿ ಪೊಲೀಸರು  ಪತ್ತೆಯಚ್ಚಿದ್ದು, ಬರೋಬ್ಬರಿ ಆರು ಕೋಟಿ ರೂ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ ಪಡೆದಿದ್ದಾರೆ. ಮಂಗಳೂರಿನಲ್ಲಿ

ಸುಮಾರು 6 ಕೆ.ಜಿ‌ ಎಂಡಿಎಂಎ ಡ್ರಗ್ ವಶಕ್ಕೆ ಪಡೆಯಲಾಗಿದ್ದು, ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ ವಶ ಕೇಸ್ ಇದಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿದ್ದ ನೈಜಿರಿಯಾ ಪ್ರಜೆ ಪೀಟರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಎಂಡಿಎಂಎ ಮಾರಾಟ ವೇಳೆ ಹೈದರ್‌ ಅಲಿ ಎಂಬಾತನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಈತ ಮಾಹಿತಿ ಆಧಾರದಲ್ಲಿ‌ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರ ತಂಡವು ಬೆಂಗಳೂರಿಗೆ ತೆರಳಿ ವಿತರಣೆಗೆ ಸಿದ್ಧವಾಗಿದ್ದ ಡ್ರಗ್ಸ್‌ ವಶಕ್ಕೆ ಪಡೆದಿದೆ.

ಇದನ್ನು ಓದಿ : ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್: ಶಿವಮೊಗ್ಗದಲ್ಲಿ ಘಟನೆ

ಹೈದರ್ ಅಲಿಯಿಂದ ಮಂಗಳೂರಿನಲ್ಲಿ 75,000 ರೂ ಮೌಲ್ಯದ 15 ಗ್ರಾಂ ಮಾದಕ ವಸ್ತು ಎಂಡಿಎಂಎ ನ್ನು ಸ್ವಾಧೀನಪಡಿಸಿಕೊಂಡು ಆತನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಂಗಳೂರಿನ ವಿವೇಕಾನಂದ ನಗರದ ಬಾಡಿಗೆ ಮನೆಯಲ್ಲಿದ್ದ ಪೀಟರ್‌ ಅಕೆಡಿ ಬೆಲನೋವು ಎಂಬಾತನನ್ನು ಪತ್ತೆ ಹಚ್ಚಿ ಆತನ ಮನೆಯಲ್ಲಿ ದಾಸ್ತಾನು ಇರಿಸಿದ್ದ ಒಟ್ಟು 6 ಕೋಟಿ ಮೌಲ್ಯದ 6.310 ಕೆಜಿ ಎಂಡಿಎಂಎ, 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕ, ಒಟ್ಟು 35 ಎಟಿಎಂ/ಡೆಬಿಟ್ ಕಾರ್ಡ್ ಗಳು, 17 ಇನ್ ಅಕ್ಟಿವ್ ಸಿಮ್ ಕಾರ್ಡ್ ಗಳು, 10 ವಿವಿಧ ಬ್ಯಾಂಕ್ ಗಳ ಬ್ಯಾಂಕ್ ಖಾತೆ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು 6,00,63,500ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನು ನೋಡಿ : ಕತ್ತು ಹಿಸುಕಿದ ಬಿಜೆಪಿಯನ್ನು ಕಣಿವೆಯ ಜನ ತಿರಸ್ಕರಿಸುವರೇ? Janashakthi Media

Donate Janashakthi Media

Leave a Reply

Your email address will not be published. Required fields are marked *