ಮಂಗಳೂರು: ನೂರಾರು ಆಧಾರ್ ಕಾರ್ಡ್‌ಗಳು ನಗರದ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿವೆ. ಇದರಿಂದ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದು, ಅಂಚೆ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಆಧಾರ್ ಕಾರ್ಡ್‌ಗಳು ತಮಗೆ ತಲುಪದ ಕಾರಣ ಅನೇಕರು ಅಧಿಕಾರಿಗಳ ಬೇಜವಾಬ್ದಾರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ, ಯು.ಟಿ. ಖಾದರ್ ಈ ಘಟನೆಯ ಸಮಗ್ರ ತನಿಖೆಗೆ ಅದೇಶಿಸಿದ್ದಾರೆ.
ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಮಾರ್ಚ್ 03, 2026ರಂದು ಅಪಾರ ಪ್ರಮಾಣದ ಆಧಾರ್ ಕಾರ್ಡ್‌ಗಳು ನದಿ ತಟದಲ್ಲಿರುವುದನ್ನು ಕಂಡು ಸಾರ್ವಜನಿಕರು ಸ್ಥಳೀಯ ಪುದು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸ್ಥಳೀಯ ಶಾಸಕನಾದ ನನಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ಬಂದಿದೆ.
ಆಧಾರ್ ಕಾರ್ಡ್‌ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಪತ್ತೆಯಾಗಲು ಕಾರಣವೇನು? ಮತ್ತು ಇದಕ್ಕೆ ಕಾರಣರಾದವರು ಯಾರೆಂಬುದನ್ನು ತನಿಖೆ ನಡೆಸಿ ಪತ್ತೆ ಹಚ್ಚಿ ತಮ್ಮ ಇಲಾಖೆಯ ಮುಖಾಂತರ ಕೂಡಲೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಯು.ಐ.ಡಿ.ಎ.ಐ ಯೋಜನಾ ವ್ಯವಸ್ಥಾಪಕರಿಗೆ ವಿಧಾನ ಸಭೆ ಸ್ಪೀಕರ್ ಮತ್ತು ಸ್ಥಳೀಯ ಶಾಸಕ ಯು.ಟಿ. ಖಾದರ್ ಸೂಚಿಸಿದ್ದಾರೆ.
ತಮ್ಮ ಕುಟುಂಬದವರ ಎಲ್ಲರ ಅಧಾರ್ ಕಾರ್ಡ್ ನದಿಯಲ್ಲಿ ಸಿಕ್ಕಿದೆ. ಗ್ರಾಮದ ನೂರಾರು ಜನರ ಕಾರ್ಡ್‌ಗಳು ಸಹ ಇದರಲ್ಲಿವೆ. ಹಣ ಪಾವತಿಸಿ ವಿಳಾಸ, ಹೆಸರು ಬದಲಾವಣೆ ಮಾಡಿಸಿದವರು ಪರಿಷ್ಕೃತ ಕಾರ್ಡ್ ಈಗ ಬರಬಹುದು, ಆಗ ಬರಬಹುದು ಎಂದು ಕಾಯುತ್ತಿದ್ದರೆ ಅವೆಲ್ಲವೂ ಈಗ ನದಿ ನೀರಲ್ಲಿ ತೇಲಿಬರುತ್ತಿರೋದು ಕಂಡುಬಂದಿದೆ. ಅಧಿಕಾರಿಗಳ ಬೇಜವಾಬ್ದಾರಿಯಿಂದಲೇ ಈ ಘಟನೆ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೆಕು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಇದನ್ನೂ ನೋಡಿ: ಪುಸ್ತಕ ಹೆಸರು ನೋಡಿ ಸಂವಾದಕ್ಕೆ ಬರಬೇಡಿ, ಓದಿ ಬನ್ನಿ – ಎಂ.ಜಿ. ಹೆಗಡೆ Janashakthi Media
