ಚಿಕ್ಕಮಗಳೂರು: ಭಾರಿ ಪ್ರಮಾಣದ ಕಾಡ್ಗಿಚ್ಚು ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯದಲ್ಲಿ ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ. ಸ್ಥಳೀಯರಲ್ಲಿ ಆತಂಕ ವ್ಯಕ್ತವಾಗಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಪಟ್ಟಿದ್ದಾರೆ.
ಶುಕ್ರವಾರ ಸಂಜೆ ಘಟನೆ ನಡೆದಿದ್ದು,ಬೆಂಕಿಯ ಕೆನ್ನಾಲಿಗೆ 10 ಕಿ.ಲೋ ಮೀಟರ್ ದೂರಕ್ಕೂ ಕಾಣಿಸುತ್ತಿದೆ. ಅಗ್ನಿ ಅವಘಡ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಬೆಂಕಿ ಹೊತ್ತಿಕೊಂಡು ಎರಡು ಗಂಟೆ ಕಳೆದರೂ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ಮಧ್ಯಪ್ರದೇಶ: RSS ಸೇರ್ಪಡೆಯಾಗುವಂತೆ ಕಿರುಕುಳ! ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರಿ ಕಾಲೇಜು ಅತಿಥಿ ಉಪನ್ಯಾಸಕ!
ಈ ಭಾಗದಲ್ಲಿ ವನ್ಯಜೀವಿ ಮತ್ತು ಸಸ್ಯ ಸಂಪತ್ತು ಅಪಾರ ಪ್ರಮಾಣದಲ್ಲಿದೆ. ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ಸರಿಯಿಲ್ಲ ಎಂದು ಸ್ಥಳೀಯರು ಕೆಂಡಕಾರಿದ್ದಾರೆ.
ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಕಾಡ್ಗಿಚ್ಚು ಆವರಿಸಿತ್ತು ರಸ್ತೆ ಬದಿ ಇದ್ದ ಬೆಂಕಿಯನ್ನಷ್ಟೇ ನಂದಿಸಲಾಗಿದ್ದು, ಗುಡ್ಡಕ್ಕೆ ಏರಿರುವ ಬೆಂಕಿ ನಂದಿಸಲು ಸಾಧ್ಯವಾಗದೆ ಪರದಾಡುವಂತಾಯ್ತು.
ಇದನ್ನೂ ನೋಡಿ: ಬಜೆಟ್‌ನಲ್ಲಿ ವಿಶೇಷ ಅನುದಾನ ನೀಡಿ : ದಲಿತ ಹಕ್ಕುಗಳ ಸಮಿತಿ ಆಗ್ರಹ Janashakthi Media