ಕೊಪ್ಪಳ: ಆಕೆ ಪ್ರತಿಭಾವಂತ ಭರತನಾಟ್ಯ ಕಲಾವಿದೆ. ಎಂಬಿಬಿಎಸ್ ಓದಿದ್ದ ಆಕೆಗೆ ಎಂಡಿ ಮಾಡುವ ಆಸೆಯಿತ್ತು. ಹೀಗಾಗಿ ಅದಕ್ಕಾಗಿ ತಯಾರಿ ಕೂಡ ನಡೆಸಿದ್ದಳು. ಆದರೆ ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಾಗ ತುಂಗಭದ್ರಾ ನದಿ ಪಾಲಾಗಿದ್ದಾಳೆ. ಹೈದ್ರಾಬಾದ್ನ ಪ್ರಭಾವಿ ಶಾಸಕ ಮತ್ತು ಮಾಜಿ ಶಾಸಕರ ಸಂಬಂಧಿಯೂ ಆಗಿರುವ ವೈದ್ಯ ವಿದ್ಯಾರ್ಥಿನಿ ಇದೀಗ ನದಿಯಲ್ಲಿ ಶವವಾಗಿ ಪತ್ತೆ ಆಗಿದ್ದಾಳೆ.
ಸಾಣಾಪುರ ಬಳಿಯಿರುವ ತುಂಗಭದ್ರಾ ನದಿಯಲ್ಲಿ ನಿನ್ನೆ ಹೈದ್ರಾಬಾದ್ ಮೂಲದ ಇಪ್ಪತ್ತೇಳು ವರ್ಷದ ವೈದ್ಯೆ ಅನನ್ಯಾ ರಾವ್ ನೀರು ಪಾಲಾಗಿದ್ದಳು. ಮೂರು ದಿನದ ಹಿಂದೆ ಹಂಪಿಗೆ ಪ್ರವಾಸ್ಕಕೆ ಬಂದಿದ್ದ ಅನನ್ಯಾ ರಾವ್, ನಿನ್ನೆ ಮುಂಜಾನೆ ಅಂಜನಾದ್ರಿಗೆ ಹೋಗಲು ಸಿದ್ದವಾಗಿದ್ದಳು. ಆದರೆ ಅದಕ್ಕೂ ಮೊದಲೇ ತುಂಗಭದ್ರಾ ನದಿ ಬಳಿ ಹೋಗಿ, ಅಲ್ಲಿನ ಪ್ರಕೃತಿ ಸೌಂದರ್ಯ ನೋಡಿಕೊಂಡು ಬರಲು ಹೋಗಿದ್ದರು. ಹರಿಯುತ್ತಿರುವ ನದಿಯನ್ನು ನೋಡುತ್ತಿದ್ದಂತೆ, ಈಜು ಬರ್ತಿದ್ದ ಅನನ್ಯಾ ರಾವ್ಗೆ ನದಿಯಲ್ಲಿ ಈಜುವ ಮನಸ್ಸು ಆಗಿದೆ.
ಇದನ್ನೂ ಓದಿ:ತಮಿಳುನಾಡು| ಬಾಲಕಿ ಮೇಲೆ 7 ಮಂದಿ ಕಾಲೇಜು ವಿದ್ಯಾರ್ಥಿಗಳಿಂದ ಸಾಮೂಹಿಕ ಅತ್ಯಾಚಾರ
ತಾನು ಬಂಡೆ ಮೇಲಿಂದ ಡೈವ್ ಹೊಡೆದು, ನದಿಯಲ್ಲಿ ಈಜುವುದನ್ನು ವಿಡಿಯೋ ಮಾಡಲು ಸ್ನೇಹಿತರಿಗೆ ಹೇಳಿದ್ದಾಳೆ. ಹಿಂಬಾಗದ ಕಲ್ಲುಬಂಡೆ ಮೇಲಿದ್ದ ಸ್ನೇಹಿತೆ ವಿಡಿಯೋ ಮಾಡಿದ್ದರೆ, ಮುಂಬಾಗದಲ್ಲಿದ್ದ ಸ್ನೇಹಿತ ಕೂಡ ವಿಡಿಯೋ ಮಾಡುತ್ತಿದ್ದ. ಈ ಸಮಯದಲ್ಲಿ ಕಷ್ಟಪಟ್ಟು ನದಿಗೆ ಜಿಗಿದಿದ್ದ ಅನನ್ಯಾ ರಾವ್, ನಾಲ್ಕೈದು ನಿಮಿಷ ಈಜಿದ್ದಾಳೆ. ನಂತರ ಸುಸ್ತಾಗಿ ನೀರಲ್ಲಿ ಮುಳಗಿದ್ದಾಳೆ. ನೀರಲ್ಲಿ ಮುಳುಗುತ್ತಿರುವ ವಿಡಿಯೋ ಮತ್ತು ನದಿಗೆ ಜಿಗಿಯುವ ವಿಡಿಯೋಗಳು ಇದೀಗ ವೈರಲ್ ಆಗಿವೆ.