ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಅನುಪಸ್ಥಿತಿಯಲ್ಲಿಯೇ ರಾಮನಗರ ನೂತನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ಮಾಡಿದಕ್ಕೆ ಜೆಡಿಎಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ, ಅಸ್ಪತ್ರೆ ಮುಂದೆಯೇ ಧಿಕ್ಕಾರ ಕೂಗಿ, ತಳ್ಳಾಟ ನಡೆಸಿ ಹೈಡ್ರಾಮ ನಡೆಸಿದ ಘಟನೆ ನಡೆದಿದೆ.
ಈ ವೇಳೆ ಕಾರ್ಯಕರ್ತರ ನಡುವೆ ಗಲಾಟೆ ನಡೆದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ರಾಮನಗರದಲ್ಲಿ ಸುಮಾರು 94 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ 500 ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ಜಿಲ್ಲಾ ಆಸ್ಪತ್ರೆಯ ಕಟ್ಟಡವನ್ನು ಬೆಳಗ್ಗೆ ಲೋಕಾರ್ಪಣೆ ಮಾಡಲು ನಿರ್ಧರಿಸಲಾಗಿತ್ತು. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಕಟ್ಟಡ ಉದ್ಘಾಟನೆ ಮಾಡಲು ಮುಂದಾದರು.
ಆದರೆ, ಆರೋಗ್ಯ ಸಚಿವ ಸುಧಾಕರ್ ಅವರಿಗೆ ಇನ್ನೊಂದು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾದ ಅನಿವಾರ್ಯತೆ ಹಿನ್ನೆಲೆಯಲ್ಲಿ ಸಂಸದ ಸುರೇಶ್ ಅವರ ಬರುವ ಮುನ್ನವೇ ಕಟ್ಟಡ ಉದ್ಘಾಟನೆ ಮಾಡಿದ್ದಾರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಕೈ- ಕೈ ಮಿಲಾಯಿಸುವ ಮಟ್ಟಿಗೆ ಜಗಳ ನಡೆದಿದ್ದು, ಇದನ್ನು ಮೊದಲೇ ನಿರೀಕ್ಷೆ ಮಾಡಿದ್ದ ಜಿಲ್ಲಾ ಪೊಲೀಸರು ಕಾರ್ಯಕರ್ತರ ಮೇಲೆ ಲಘು ಲಾಠಿ ಪ್ರಹಾರ ಮಾಡಿ ಗಲಾಟೆಯನ್ನು ನಿಯಂತ್ರಣಕ್ಕೆ ತಂದರು.
ಇನ್ನು ಸಂಸದ ಡಿ.ಕೆ. ಶಿವಕುಮಾರ್ ಅವರು ಯಾರೀ ಅದು ಸಚಿವರು ನಾನು ಒಬ್ಬ ಜನಪ್ರತಿನಿಧಿ ಅನ್ನೋದನ್ನು ಮರೆತು ಉದ್ಘಾಟನೆ ಮಾಡಿದ್ದಾರೆ ಎಂದು ಹರಿಹಾಯ್ದರು. ಈ ವೇಳೆ ಗಲಾಟೆ ಬೇಡ ಮಾತನಾಡೋಣ ಎಂದ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ಅವರನ್ನು ಸಮಾಧಾನ ಮಾಡಿದರು. ಇದೇ ಸಂದರ್ಭದಲ್ಲಿ ಸ್ಥಳೀಯ ಶಾಸಕಿ ಅನಿತಾ ಕುಮಾರಸ್ವಾಮಿ, ಎಚ್.ಡಿ.ಕುಮಾರಸ್ವಾಮಿ ಅವರು ಬರುವವರೆಗು ಕಾಯಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಪಟ್ಟು ಹಿಡಿದರು.
ಸಂಸದ ಡಿ.ಕೆ.ಸುರೇಶ್ ಆಗಮಿಸುತ್ತಿದ್ದಂತೆ ಅವರ ಹಿಂದೆ ಒಂದಷ್ಟು ಕಾರ್ಯಕರ್ತರು ಆಸ್ಪತ್ರೆ ಪ್ರವೇಶಿಸಲು ಪ್ರಯತ್ನಿಸಿದರು. ಆದರೆ, ಪೊಲೀಸರು ತಡೆ ಹೊಡ್ಡಿದರು. ಹೀಗಿದ್ದರೂ, ಒಂದಷ್ಟು ಕಾರ್ಯಕರ್ತರು ಆಸ್ಪತ್ರೆ ಪ್ರವೇಶಿಸಿದರು. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ತಳ್ಳಾಟ ನಡೆಯಿತು.
ನಾವೇ ಉದ್ಘಾಟನೆಗೆ ಸೂಚಿಸಿದ್ದೆವು
ಘಟನೆ ಬಳಿಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಸ್ಥಳಕ್ಕೆ ಬಂದರು. ಆ ನಂತರ ಆಸ್ಪತ್ರೆಯಲ್ಲಿ ಒಂದು ಸುತ್ತು ಹಾಕಿದರು. ಸಚಿವರನ್ನು ಭೇಟಿಯಾಗದೇ ವೇದಿಕೆ ಮುಂಭಾಗ ಕುಳಿತುಕೊಂಡರು. ಈ ವೇಳೆ ಕುಮಾರಸ್ವಾಮಿ ಮಾತನಾಡಿ, ನಾವು ಬರುವುದು ತಡವಾಗುತ್ತದೆ. ಹೀಗಾಗಿ ಉದ್ಘಾಟನೆ ನಡೆಸಿ ಎಂದು ಹೇಳಿದ್ದೆವು. ಆದರೆ, ನಮ್ಮ ಕಾರ್ಯಕರ್ತರಿಗೆ ಈ ವಿಚಾರ ತಿಳಿದಿರಲಿಲ್ಲ ಎಂದರು.
ಶಾಸಕ ಎ.ಮಂಜುನಾಥ್, ವಿಧಾನಪರಿಷತ್ ಸದಸ್ಯರಾದ ಎಸ್. ರವಿ, ಸಿ.ಎಂ.ಲಿಂಗಪ್ಪ, ಆ.ದೇವೆಗೌಡ ಭಾಗವಹಿಸಿದ್ದರು.ಕೆಲವು ದಿನಗಳ ಹಿಂದೆ ಹಾರೋಹಳ್ಳಿ ತಾಲೂಕು ಲೋಕಾರ್ಪಣೆ ವೇಳೆಯೂ ಸಚಿವ ಅಶ್ವತ್ಥ ನಾರಾಯಣ ಅವರು ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಕಾಯದೇ ಉದ್ಘಾಟನೆ ನೆರವೇರಿಸಿದ್ದರು. ಈ ವೇಳೆಯೂ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿತ್ತು.