ಹೈಕಮಾಂಡ್ ಓಕೆ ಅಂದ್ರೆ ನಾನು ಸಿಎಂ ಆಗಲು ಸಿದ್ದ | ಸಚಿವ ಪ್ರಿಯಾಂಕ್ ಖರ್ಗೆ

ಮೈಸೂರು: ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತಾರಕ್ಕೇರಿದೆ. ಸಿದ್ದರಾಮಯ್ಯ ಬೆಂಬಲಿಗರು ಅವರ ಪರ ಬ್ಯಾಟಿಂಗ್ ಮಾಡಿದ್ರೆ,ಇತ್ತ ಡಿಕೆಶಿ ಪರ ಶಾಸಕರು ಅವರ ಪರವಾಗಿ ಬ್ಯಾಟಿಂಗ್ ಮಾಡ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಒಂದು ವೇಳೆ ಹೈ ಕಮಾಂಡ್ ನೀನು ಸಿಎಂ ಆಗು ಅಂದರು ನಾನು ಸಿದ್ದನಿದ್ದೇನೆ ಎಂದು ಹೇಳು ಮೂಲಕ ಸಿಎಂ ಸ್ಥಾನದ ಆಕಾಂಕ್ಷಿ ಎಂಬುದನ್ನು ದೃಢಪಡಿಸಿದ್ದಾರೆ. ಹೈಕಮಾಂಡ್ 

ನಗರದಲ್ಲಿ ಇಂದು ಮಾತಾಡಿದ ಅವರು, ಸಿಎಂ ಆಯ್ಕೆ ಬಗ್ಗೆ ಅವರವರ ವೈಯಕ್ತಿಕ ಹೇಳಿಕೆ ನೀಡುತ್ರಿದ್ದಾರೆ. ಆದರೆ ಹೈ ಕಮಾಂಡ್ ಯಾರು ಸಿಎಂ ಆಗಬೇಕು, ಮುಂದುವರೆಯಬೇಕು ಎಂಬುದನ್ನ ನಿರ್ಧರಿಸುತ್ತೆ. ಒಂದು ವೇಳೆ ಹೈ ಕಮಾಂಡ್ ನೀನು ಸಿಎಂ ಆಗು ಅಂದರು ನಾನು ಸಿದ್ದನಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ನಾನು ಯಾಕೆ ಸಿಎಂ ಆಗಬಾರದು: ಪರಮೇಶ್ವರ್‌ ಪ್ರಶ್ನೆ

ಮುಂದುವರೆದು, ದೆಹಲಿಯಲ್ಲಿ ನಾಲ್ಕು ಜನ ಕುಳಿತು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಜಿಲ್ಲಾ ಪಂಚಾಯತ್ ಸದಸ್ಯರಿಂದ ಹಿಡಿದು ಶಾಸಕರವರೆಗೆ ಎಲ್ಲಾರಿಗೂ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರವಿದೆ. ಇದರಲ್ಲಿ ತಪ್ಪು ಏನು ಇಲ್ಲ. ಆದ್ರೆ ಅವರ ಹೇಳಿಕೆ, ಕಲ್ಲಿನಲ್ಲಿ ಕೆತ್ತಿದ ಶಾಸನವಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ವಿಪಕ್ಷ ಎಲ್ಲಿದೆ. ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪಿಪಿಲ್ ಲೆಸ್ ಪಾರ್ಟಿಯಾಗಿದೆ. ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ದ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರು ಸಿಗುತ್ತಿತ್ತು. ಬಿಜೆಪಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಟೀಕಿಸಿದ್ದಾರೆ.

ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದಾರೆ. ಈಗ ಮಾತನಾಡಿದರೆ ಮಗನಿಗೆ ಸ್ಥಾನ ಸಿಗಬಹುದು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಜೆಡಿಎಸ್ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ನ ಕುಟುಂಬದವರು ಹೋಗಿ ಮಾಡಿಕೊಂಡು ಬಂದ ಮೈತ್ರಿ ಇದು. ರಾಜ್ಯದ ಬಿಜೆಪಿ ನಾಯಕರು ಸಹ ಹೊಗಿಲ್ಲ. ರೇಣುಕಾಚಾರ್ಯ, ಮಾಜಿ ಸಚಿವರು, ಮಾಜಿ ಸಿಎಂ ಎಲ್ಲರನ್ನೂ ಕತ್ತಲಲ್ಲಿಟ್ಟು ಮೈತ್ರಿ ಮಾಡಲಾಗಿದೆ. ಬಿಜೆಪಿಯವರು ತಮ್ಮದನ್ನ ತಾವು ನೋಡಿಕೊಳ್ಳಲಿ. ಕಾಂಗ್ರೆಸ್ ನ ಚಿಂತೆ ಅವರಿಗೆ ಬೇಡ. ನಮ್ಮ ಆದ್ಯತೆ ಐದು ಗ್ಯಾರೆಂಟಿಗಳನ್ನ ಅನುಷ್ಟಾನ ಮಾಡುವುದು ಎಂದು ಹೇಳಿದ್ದಾರೆ. ಹೈಕಮಾಂಡ್ 

ವಿಡಿಯೋ ನೋಡಿ:ಬಿಜೆಪಿ-ಜೆಡಿಎಸ್​ ವಿರುದ್ಧ ಕಾಂಗ್ರೆಸ್​ ವಕ್ತಾರ ಎಂ ಲಕ್ಷ್ಮಣ್ ವಾಗ್ದಾಳಿ Janashakthi Media

Donate Janashakthi Media

Leave a Reply

Your email address will not be published. Required fields are marked *