ನನಗೂ ಜೀವ ಬೆದರಿಕೆ ಕರೆ ಬಂದಿದೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೀವ ಬೆದರಿಕೆ ಕರೆ ಬಂದಿರುವುದಾಗಿ ಸ್ವತಹ ಅವರೇ ಹೇಳಿಕೊಂಡಿದ್ದಾರೆ. ನನಗೂ 

ನಗರದ ತೂಬಿನಕೆರೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಸ್ಪೀಕರ್ ಖಾದರ್ ಗೆ ಮಾತ್ರವಲ್ಲ ನನಗೂ ಜೀವ ಬೆದರಿಕೆ ಕರೆ ಬಂದಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ರಿಗೆ ಅಂಡರ್ ವರ್ಲ್ಡ್ ನಿಂದ ಜೀವ ಬೆದರಿಕೆ ಕರೆ ಬಂದಿರುವುದಾಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ avru, ಅಂಡರ್ ವರ್ಲ್ಡ್ ನಿಂದ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ.

ಇದನ್ನೂ ಓದಿ: ಅಂತಃಕರಣವಿಲ್ಲದ ವ್ಯವಸ್ಥೆಯ ಕರಣ ಹಾಗೂ ಕಾರಣಗಳು ; ಬಿ ಸುರೇಶ್

ಅಂಡರ್ ವರ್ಲ್ಡ್ ಸೇರಿ ಕೆಲವು ಕಡೆಗಳಿಂದ ಕರೆಗಳು ಬಂದಿವೆ. ಈ ಹಿಂದೆಯೂ ಕೆಲವು ಬಾರಿ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ. ನನಗಾಗಿ ಮಂಗಳೂರಿನಲ್ಲಿ ಎನ್‌ಐಎ ಸ್ಥಾಪಿಸುವುದು ಬೇಡ. ಜಿಲ್ಲೆಯ ಜನಕ್ಕಾಗಿ ಮಾಡುವುದಾದರೆ ಮಾಡಲಿ ಎಂದರು.

ಎಲ್ಲಿ ಹುಟ್ಟಬೇಕು, ಎಲ್ಲಿ ಸಾಯಬೇಕು ಎಂಬುದನ್ನು ಆ ದೇವರು ಬರೆದಿದ್ದಾನೆ. ನೆಮ್ಮದಿಯಾಗಿ ಸಾಯುವ ಪರಿಸ್ಥಿತಿ ಮಾಡಿಕೊಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇವರು ಇಟ್ಟಂತೆ ಇರಲಿ, ನಮ್ಮ ಕೈಯಲ್ಲಿ ಏನೂ ಇಲ್ಲ ಈಗ ಮಾತನಾಡುತ್ತಿದ್ದೇನೆ. ಮರಳಿ ಮತ್ತೆ ಹೋಗುತ್ತೇನೆ ಎನ್ನುವ ಗ್ಯಾರಂಟಿ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ನೋಡಿ: ವಚನಾನುಭವ 28| ಒಲಿದವರ ಕೊಲುವಡೆ ಮಸೆದ ಕೂರಲಗೇಕೆ? ಗಜೇಶ ಮಸಣಯ್ಯ Janashakthi Media

Donate Janashakthi Media

Leave a Reply

Your email address will not be published. Required fields are marked *