ಬೆಂಗಳೂರು: ತೈವಾನ್‌ನ ಫಾಕ್ಸ್‌ಕಾನ್ ಕಂಪನಿ ಆ್ಯಪಲ್ ಐ ಫೋನ್ ಸಂಸ್ಥೆಯಾಗಿದ್ದು, ತನ್ನ ಉತ್ಪನ್ನಗಳ ತಯಾರಿಕಾ ಘಟಕವನ್ನು ಕರ್ನಾಟಕದಲ್ಲಿ ಆರಂಭ ಮಾಡುತ್ತಿದ್ದು, ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಕೆಐಎಡಿಬಿ ಪ್ರದೇಶದಲ್ಲಿ ಘಟಕ ಸ್ಥಾಪನೆಯಾಗಲಿದೆ. ಇದಕ್ಕಾಗಿ ಕಂಪನಿಯೂ ರೂ. 5,727 ಕೋಟಿ ಹೂಡಿಕೆ ಮಾಡಲಿದೆ.
ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವೇ ಈ ಘಟಕ ಸ್ಥಾಪಿಸುವ ಸಾಧ್ಯತೆಗಳಿವೆ. ಅದಕ್ಕಾಗಿ 300 ಎಕರೆ ಜಾಗ ಗುರುತಿಸಲಾಗಿದೆ. ಇದರಿಂದಾಗಿ ಒಂದು ಲಕ್ಷಕ್ಕೂ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕಂಪನಿ ಪ್ರಕಟಿಸಿದೆ.
ಇದನ್ನು ಓದಿ: ಅರ್ಥವ್ಯವಸ್ಥೆಯ ಮೂಲ ಸಮಸ್ಯೆಯನ್ನೇ ನಿರ್ಲಕ್ಷಿಸಿದ 2023-24ರ ಬಜೆಟ್ – ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸುವಲ್ಲಿ ವಿಫಲತೆ
ಫಾಕ್ಸ್‌ಕಾನ್ ಕಂಪನಿಯ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ನೇತೃತ್ವದ ಉನ್ನತ ಮಟ್ಟದ ನಿಯೋಗ ಈಗಾಗಲೇ ಸ್ಥಳ ವೀಕ್ಷಣೆ ನಡೆಸಿದೆ. ಬೆಂಗಳೂರು ನಗರಕ್ಕೆ ಅವರು ಆಗಮಿಸಿದ ವೇಳೆ ವಿಮಾನ ನಿಲ್ದಾಣದಲ್ಲಿ ಐಟಿ, ಬಿಟಿ ಸಚಿವ ಡಾ|| ಸಿ.ಎನ್.ಅಶ್ವತ್ಥನಾರಾಯಣ ಸ್ವಾಗತಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆ್ಯಪಲ್ ಮೊಬೈಲ್ ತಯಾರಿಕಾ ಸಂಸ್ಥೆ ಶೀಘ್ರದಲ್ಲೇ ಕರ್ನಾಟಕದಲ್ಲಿ ತಯಾರಿಕಾ ಘಟಕ ಸ್ಥಾಪನೆ ಮಾಡಲಿದೆ. ಇದರಿಂದ 1 ಲಕ್ಷ ಉದ್ಯೋಗ ಸೃಷ್ಟಿ ಜತೆ ರಾಜ್ಯಕ್ಕೆ ಹಲವು ಅವಕಾಶ ಒದಗಿ ಬರಲಿದೆ ಎಂದಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ