ಮಂಗಳೂರು: ನಗರದ ವಿಮಾನ ನಿಲ್ದಾಣದಲ್ಲಿ ‘ಐದು ವರ್ಷ ನೀವೇ ಮುಖ್ಯ ಮಂತ್ರಿಯಾಗಿ ಮುಂದುವರಿಯುತ್ತೀರಾ’ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಪಕ್ಷದ ಹೈ ಕಮಾಂಡ್ ತೀರ್ಮಾನಿಸಿದರೆ ಐದು ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ಹೈ ಕಮಾಂಡ್ ತೀರ್ಮಾನವೇ ಅಂತಿಮ” ಎಂದು ತಿಳಿಸಿದ್ದಾರೆ.
ಕೆಲವರು ತಾವೂ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ, ‘ಪ್ರಜಾಪ್ರಭುತ್ವದಲ್ಲಿ ಸ್ಪರ್ಧೆಯಲ್ಲಿ ಇರಬಾರದು ಎಂದು ಹೇಳಲು ಆಗಲ್ಲ. ಆಕಾಂಕ್ಷೆ ವ್ಯಕ್ತಪಡಿಸುವುದು ಅವರ ಹಕ್ಕು. ಅಂತಿಮವಾಗಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದರು.
ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಚುನಾವಣೆ: ಲಕ್ಷ್ಮಣ ಸವದಿಗೆ ಗೆಲುವು
‘ಮುಖ್ಯಮಂತ್ರಿ ಬದಲಾವಣೆ ವಿಷಯ ಪದೇ ಪದೇ ಏಕೆ ಚರ್ಚೆಯಾಗುತ್ತಿದೆ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ನೀವು (ಮಾಧ್ಯಮದವರು) ಪದೇ ಪದೇ ಕೇಳುತ್ತೀರಲ್ಲ. ಅದಕ್ಕೆ ವಿಷಯ ಚರ್ಚೆಗೆ ಬರುತ್ತದೆ’ ಎಂದರು.
ಇದನ್ನೂ ನೋಡಿ: ಧರ್ಮಸ್ಥಳದ ನಿಗೂಢಗಳು | ಕ್ಲೈಮ್ಯಾಕ್ಸ್‌ನತ್ತ SIT ತನಿಖೆ ; ಫಲಿತಾಂಶಕ್ಕಾಗಿ ಕಾಯೋಣ Janashakthi Media
