ಬೆಳಗಾವಿ: ಕಾಂಗ್ರೆಸ್‌ನ ಐದು ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿಸ್ವೀಕಾರ ಪ್ರರಾಂಭವಾಗಿದ್ದು, ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಜನರಿಂದ ಹಣ ಪಡೆದರೆ ಅಥವಾ ಯೋಜನೆ ಅನುಷ್ಠಾನಕ್ಕೆ ನಿರ್ಲಕ್ಷ್ಯ ತೋರಿದರೆ,ಅಂತಹವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು ಅವರು ನೋಂದಣಿ ಪ್ರಕ್ರಿಯೆಗೆ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದ 3 ಕೇಂದ್ರಗಳ ಲಾಗಿನ್ ಐಡಿ ಹಿಂಪಡೆಯಲಾಗಿದೆ ಎಂದು ತಿಳಿಸಿದರು. ಯೋಜನೆ ದುರ್ಬಳಕೆ ತಡೆಯಲು ಸರ್ಕಾರ ಸುಮ್ಮನೆ ಕುಳಿತಲ್ಲ ಎಂದು ಸ್ಪಷ್ಟಪಡಿಸಿದರು.
ಇದ್ದನೂ ಓದಿ:ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ಗೃಹಲಕ್ಷ್ಮಿ ಯೋಜನೆ ನೋಂದಣಿ ಕಾರ್ಯವನ್ನು ನಾವು ಉಚಿತವಾಗಿ ಮಾಡಿಸಿಕೊಳ್ಳತ್ತಿಲ್ಲ.ಪ್ರತಿ ಅರ್ಜಿ ಅಪ್‌ಲೋಡ್ ಮಾಡುವವರಿಗೆ ಸರ್ಕಾರದಿಂದಲೇ 12 ರೂ ಕೊಡುತ್ತಿದ್ದೇವೆ.ಹಾಗಾಗಿ ಜನರು ಯಾರಿಗೂ ಹಣ ಕೊಡಬೇಕಿಲ್ಲ ಎಂದು ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಗೆ ಫಲಾನುಭವಿಗಳಿಂದ ಹಣ ಪಡೆಯುವುದು ಕಂಡುಬಂದರೆ ಅಂತಹವರ ಲಾಗಿನ್ ಐಡಿ ಮತ್ತು ಪಾರ್ಸ್‌ವರ್ಡ್ ಹಿಂದಕ್ಕೆ ಪಡೆಯಬೇಕು.ನಿಯಮ ಗಾಳಿಗೆ ತೂರಿದವರ ವಿರುದ್ದ ಪ್ರಕಣವನ್ನೂ ದಾಖಲಿಸಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದರು. ಯಾರಾದರೂ ಹಣ ತೆಗೆದುಕೊಳ್ಳುವುದು ಕಂಡುಬಂದರೆ ತಹಶೀಲ್ದಾರರು,ಪಿಡಿಒಗಳು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು, ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ಕೊಡಬೇಕು ಎಂದು ಸಾರ್ವಜನಿಕರಿಗೆ ತಿಳಿಸಿದರು.