ಬೆಂಗಳೂರು: ಇನ್ನು ಮುಂದೆ SSLCಯಲ್ಲಿ ಶೇ. 33 ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಪ್ರಸಕ್ತ ವರ್ಷದಿಂದ ಶೇ. 33 ಅಂಕ ಪಡೆದರೆ SSLC ಉತ್ತೀರ್ಣ ಎಂದು ಘೋಷಿಸಲಾಗುವುದು. 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ ಶೇ. 33 ಪಡೆಯಬೇಕಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ 3 ಪರೀಕ್ಷೆ ವ್ಯವಸ್ಥೆ ಜಾರಿ ಮಾಡಿದ್ದೇವೆ. ಪಾರದರ್ಶಕವಾಗಿ ಇರಲಿ ಅಂತ ವೆಬ್ ಕ್ಯಾಸ್ಟ್ ಮಾಡಿದ್ದೆವು. ಪರೀಕ್ಷೆಗಳು ಉತ್ತಮವಾಗಿ ನಡೆದವು.
ಇದನ್ನೂ ಓದಿ: ಒತ್ತುವರಿ ಪ್ರದೇಶದಲ್ಲಿ ನಿರ್ಮಿಸಿದ್ದ ಮನೆಗಳು ತೆರವು; 25 ಕುಟುಂಬಗಳ ಕಾರ್ಮಿಕರು ಬೀದಿ ಪಾಲು
ವೆಬ್ ಕ್ಯಾಸ್ಟಿಂಗ್‌ನಿಂದ ಕಡಿಮೆ ಅಂಕ ಬಂದಾಗ ಶಿಕ್ಷಕರು ಜವಾಬ್ದಾರಿ ತಗೊಂಡು ಕೆಲಸ ಮಾಡಿದರು. ವಿಶೇಷ ತರಗತಿ ಪಡೆದು ವಿದ್ಯಾರ್ಥಿಗಳನ್ನು ತಯಾರು ಮಾಡಿದರು.
ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದು ವಿವರಿಸಿದರು. ಇದೀಗ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಶೇ. 33 ರಷ್ಟು ಉತ್ತೀರ್ಣದ ಅಂಕ ನಿಗದಿ ಮಾಡಲಾಗಿದೆ. 625ಕ್ಕೆ 206 ಅಂಕ ಪಡೆದರೆ ಅಥವಾ ಆಯಾ ವಿಷಯದ ಒಟ್ಟು ಅಂಕಗಳಲ್ಲಿ 30 ಅಂಕ ಪಡೆದಿರಬೇಕು. ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು ಶೇ. 33 ರಷ್ಟು ಅಂಕ ಪಡೆದ ವಿದ್ಯಾರ್ಥಿಯನ್ನು ಉತ್ತೀರ್ಣ ಎಂದು ಘೋಷಿಸಲಾಗುತ್ತದೆ ತಿಳಿಸಿದರು.
2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗೋ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ.
ಇದನ್ನೂ ನೋಡಿ: CITU 14ನೇ ಜಿಲ್ಲಾ ಸಮ್ಮೇಳನದಲ್ಲಿ ಯೋಗ ಪ್ರದರ್ಶಿಸಿದ ರಾಜ್ಯ ಪ್ರಶಸ್ತಿ ವಿಜೇತೆ ಐಶ್ವರ್ಯ Janashakthi Media
