ಉಳ್ಳಾಲ: ದೇಶದಲ್ಲಿ ನೀಟ್ ಪರೀಕ್ಷೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆಗಳನ್ನು ಮುಂದಿಟ್ಟು ದೆಹಲಿಯ ಜಂತರ್ ಮಂತರದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಿರುವ ವಿದ್ಯಾರ್ಥಿ ಯುವಜನರ ಮೇಲೆ ನರೇಂದ್ರ ಮೋದಿ ಸರಕಾರ ಪೊಲೀಸ್ ಬಲ ಪ್ರಯೋಗಿಸಿ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಆರೋಪಿಸಿದರು.
ವಿದ್ಯಾರ್ಥಿ, ಯುವಜನರ ಬೇಡಿಕೆಗಳನ್ನು ನಿರ್ಲಕ್ಷ ಮಾಡುವುದು ದೇಶದ ಹಿತಕ್ಕೆ ಮಾರಕ ಎಂದು ಜುಲೈ 24ರಂದು ಡಿವೈಎಫ್ಐ ಹರೇಕಳ ಘಟಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು ಹೇಳಿದರು.
ಇದನ್ನೂ ಓದಿ: ನ್ಯಾಯಬೆಲೆ ಅಂಗಡಿಗಳ ಕಾರ್ಯಾವಧಿ ವಿಸ್ತರಣೆ: ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಪಡಿತರ ವಿತರಣೆ
ಪೊಲೀಸ್ ಆಯುಧ ಬಳಸಿಕೊಂಡು ಸಂವಿಧಾನ ಬದ್ದವಾಗಿ ನಡೆಸುವ ಹೋರಾಟದ ಹಕ್ಕನ್ನು ನಿರಾಕರಿಸುವ ಮೋದಿ ಸರಕಾರದ ಪ್ರಯತ್ನಕ್ಕೆ ಸೋಲಾಗಲಿದೆ ಎಂದರು.
ಡಿವೈಎಫ್ಐ ಜಿಲ್ಲಾ ಮುಖಂಡರಾದ ರಿಜ್ವಾನ್ ಹರೇಕಳ, ಸುನಿಲ್ ಕುತ್ತಾರ್,ಅಶ್ರಫ್ ಹರೇಕಳ,ಉಳ್ಳಾಲ ತಾಲೂಕು ಮಾಜಿ ಅಧ್ಯಕ್ಷರಾದ ರಫೀಕ್ ಹರೇಕಳ ಮಾತನಾಡಿದರು.
ಹರೇಕಳ ಘಟಕ ಅಧ್ಯಕ್ಷರಾದ ಕೆ.ಎಚ್ ಇಕ್ಬಾಲ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಹೈದರ್ ಆಲಡ್ಕ ಸ್ವಾಗತಿಸಿ, ವಂದಿಸಿದರು.
ಇದನ್ನೂ ನೋಡಿ: ನೀಟ್ ಹಗರಣ | ವಿದ್ಯಾರ್ಥಿಗಳೇ ಎದ್ದೇಳಿ! ಹೋರಾಟಕ್ಕೆ ಜೊತೆಯಾಗಿ — ನಟ ಕಿಶೋರ್ ಮನವಿ Janashakthi Media
