ಅಂಗವಿಕಲ ಬಾಲಕಿ ಮೇಲೆ ಅತ್ಯಾಚಾರ; ಐಐಟಿ ವಿದ್ಯಾರ್ಥಿ ಬಂಧನ

ಠಾಣೆ: 13 ವರ್ಷದ ಅಂಗವಿಕಲ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಮಹಾರಾಷ್ಟ್ರದ ಠಾಣೆಯಲ್ಲಿ ನಡೆದಿದ್ದೂ, ಈ ಆರೋಪದಡಿ ಖರಗಪುರದ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಐಐಟಿ) ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಜೂನ್‌ 13 ಶುಕ್ರವಾರದಂದು ಪೊಲೀಸರು ತಿಳಿಸಿದ್ದಾರೆ. ಅಂಗವಿಕಲ

ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ 23 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮರು ಜಾತಿಗಣತಿ: ಎಚ್.ವಿಶ್ವನಾಥ್‌ ಕಿಡಿ

‘ಆರೋಪಿಯು ಕಲ್ವಾ ಪ್ರದೇಶದಲ್ಲಿ ವಾಸಿಸುತ್ತಿದ್ದ. ಬಾಲಕಿಗೆ ಹೊಸ ಬಟ್ಟೆ ಕೊಡಿಸುವುದಾಗಿ ಆಮಿಷವೊಡ್ಡಿ, ಅತ್ಯಾಚಾರ ಎಸಗಿದ್ದಾನೆ. ತನಿಖಾ ತಂಡವು ಆರೋಪಿ ಮೊಬೈಲ್‌ ಫೋನ್‌ ಪರಿಶೀಲಿಸಿದಾಗ, ಅದರಲ್ಲಿ ಲೈಂಗಿಕ ದೌರ್ಜನ್ಯದ ವಿಡಿಯೋ ಮತ್ತು ಇತರ ಯುವತಿಯರ ಆಕ್ಷೇಪಾರ್ಹ ವಿಡಿಯೋ ಮತ್ತು ಫೋಟೊ ಇರುವುದು ತಿಳಿದುಬಂದಿದೆ’ ಎಂದು ಅವರು ಹೇಳಿದ್ದಾರೆ.

ಆರೋಪಿ, ಈ ಹಿಂದೆ ಅನೇಕ ಯುವತಿಯರ ಮೇಲೆ ದೌರ್ಜನ್ಯವೆಸಗಿರುವ ಶಂಕೆ ವ್ಯಕ್ತವಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

ಇದನ್ನೂ ನೋಡಿ: ಅಭಿಮಾನಿಗಳ ಉನ್ಮಾದ, ಸರ್ಕಾರದ ಅತ್ಯುತ್ಸಾಹ ಮತ್ತು ಮಾರುಕಟ್ಟೆಯ ದಾಹ Janashakthi Media

Donate Janashakthi Media

Leave a Reply

Your email address will not be published. Required fields are marked *