ಮೈಸೂರು: ಈ ಹಿಂದೆ ಜಾರಿ ನಿರ್ದೇಶನಾಲಯ (ED) ಮೂಡ ಪ್ರಕರಣಕ್ಕೆ ಸಂಬಂಧಿಸಿದಂತೆ 300 ಕೋಟಿ ರೂ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿತ್ತು. ಈ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಬಹಿರಂಗವಾಗಿರಲಿಲ್ಲ. ಆದರೆ ಇದೀಗ ಮುಟ್ಟುಗೋಲು ಹಾಕಿದ ಪಟ್ಟಿಯನ್ನು ಮೈಸೂರು ಅಭಿವೃದ್ಧಿ ಪ್ರಾಧಿಕಾರ ಸೇರಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಇ.ಡಿ ರವಾನೆ ಮಾಡಿದೆ.
ಇ.ಡಿ ಬಿಡುಗಡೆ ಮಾಡಿದ ಮೂರನೇ ಪಟ್ಟಿಯಲ್ಲಿ ಒಬ್ಬನೇ ವ್ಯಕ್ತಿಗೆ ಅಕ್ರಮವಾಗಿ 30 ರಿಂದ 40 ನಿವೇಶನಗಳು ಕೊಟ್ಟಿರುವುದು ಪತ್ತೆ ಆಗಿದೆ. ಆ ಮೂಲಕ ಮೂಡ ಪ್ರಕರಣದ ಮತ್ತಷ್ಟು ಕರ್ಮಕಾಂಡ ಬಯಲಾಗಿದೆ.
ಮೂಡ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ. ಮೂಡ ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ನಡೆಸಿ ಇತ್ತೀಚೆಗೆ 300 ಕೋಟಿ ರೂ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿತ್ತು. ಸದ್ಯ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆ ಆಗಿದೆ.
ಇದನ್ನೂ ಓದಿ: ಬೆಂಗಳೂರು| 50 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆ ಪ್ರಾರಂಭಿಸಲು ಮಂಜೂರಾತಿ
ಒಬ್ಬ ವ್ಯಕ್ತಿಗೆ ಅಕ್ರಮವಾಗಿ 30ಕ್ಕೂ ಹೆಚ್ಚು ನಿವೇಶನ ಹಂಚಿಕೆ ಪತ್ತೆ
ಇ.ಡಿ ಬಿಡುಗಡೆ ಮಾಡಿದ ಮೂರನೇ ಪಟ್ಟಿ ಪ್ರಕಾರ ಒಬ್ಬನೇ ವ್ಯಕ್ತಿಗೆ ಅಕ್ರಮವಾಗಿ 30 ರಿಂದ 40 ನಿವೇಶನಗಳನ್ನು ಕೊಟ್ಟಿರುವುದನ್ನು ಇ.ಡಿ ಪತ್ತೆ ಹಚ್ಚಿದೆ. ಮೈಸೂರಿನ ಹೆಸರಾಂತ ಚರ್ಚ್ ಕ್ಯಾಥೆಡ್ರಲ್ ಪರೀಷ್ ಸೊಸೈಟಿ ಒಂದಕ್ಕೆ ನೀಡಿದ್ದ 40 ಸೈಟ್ಗಳನ್ನು ಮುಟ್ಟುಗೋಲು ಹಾಕಲಾಗಿದೆ.
7 ನೇ ವಯಸ್ಸಿನಲ್ಲಿ ಭೂಮಿ ಕಳೆದುಕೊಂಡಿದ್ದೇನೆ ಎಂದು ಅರ್ಜಿ ಹಾಕಿದ್ದ ಅಬ್ದುಲ್ ವಾಹಿದ್ ಎಂಬಾತನಿಗೆ ನೀಡಿದ್ದ 41 ಸೈಟ್ಗಳನ್ನು ಇ.ಡಿ ವಶಕ್ಕೆ ಪಡೆದುಕೊಂಡಿದೆ. ಅಲ್ಲದೆ ಕುವೆಂಪು ನಗರದ ರವಿಕುಮಾರ್, ಸುಜಾತ, ಮಹೇಶ್ ಹಾಗೂ ರಾಜು ಕುಟುಂಬಕ್ಕೆ ನೀಡಿದ್ದ 31 ನಿವೇಶನಗಳು ಮತ್ತು ಪ್ರತಿಷ್ಠಿತ ಆಂದೋಲನ ವೃತ್ತದ ಬಳಿ ಹಲವರಿಗೆ ನೀಡಿದ್ದ 48 ಬೇನಾಮಿ ಸೈಟ್ಗಳನ್ನು ಇಡಿ ಮುಟ್ಟುಗೋಲು ಹಾಕಿದೆ.
ಇನ್ನು ನಗರದ ಹೃದಯ ಭಾಗದಲ್ಲೇ ಮುಡಾ ಕೈತಪ್ಪಿ ಹೋಗುತ್ತಿದ್ದ ಜಾಗವನ್ನು ಇ.ಡಿ ಸೀಜ್ ಮಾಡಿದೆ. ಕುವೆಂಪು ನಗರ, ದಟ್ಟಗಳ್ಳಿ, ಆಂದೋಲನ ವೃತ್ತ, ವಿಜಯ ನಗರ, ಜೆ.ಪಿ.ನಗರ, ದೇವನೂರು ಬಡಾವಣೆ ಆರ್.ಟಿ.ನಗರಗಳಲ್ಲಿ ಬೇನಾಮಿಯಾಗಿ ಸೈಟ್‌ಗಳು ನೀಡಲಾಗಿತ್ತು. ಇವುಗಳಲಿಂದಲೇ ಮುಡಾಗೆ ಸುಮಾರು 500 ಕೋಟಿ ರೂ ನಷ್ಟ ಸಾಧ್ಯತೆ ಎನ್ನಲಾಗಿದೆ. ಸದ್ಯ ಪಟ್ಟಿಯಲ್ಲಿರುವ ಯಾವುದೇ ನಿವೇಶನದ ಪರಭಾರೆ ಮಾಡದಂತೆ ತಡೆ ನೀಡಲಾಗಿದೆ.
ಸಂಚಲನ ಸೃಷ್ಟಿಸಿದ್ದ ಪ್ರಕರಣ
ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿಬಂದಿತ್ತು. ಸಿಎಂ ಪತ್ನಿ ಪಾರ್ವತಿಗೆ ಮುಡಾ 14 ಸೈಟ್ಗಳನ್ನು ಅಕ್ರಮವಾಗಿ ನೀಡಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ನಂತರ ಇಡಿ ಕೂಡ ಪ್ರಕರಣ ದಾಖಲಿಸಿತ್ತು.
ಅದಾದ ಬಳಿಕ ಪ್ರಕರಣ ದೊಡ್ಡ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ ಪತ್ನಿ ಪಾರ್ವತಿ ಸೈಟ್ಗಳನ್ನು ಮುಡಾಕ್ಕೆ ವಾಪಸ್ ನೀಡಿದ್ದರು. ಉಳಿದಂತೆ, ಮುಡಾ ಹಗರಣದಲ್ಲಿನ ಹಣಕಾಸು ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಅಕ್ರಮವಾಗಿ ಹಂಚಿಕೆಯಾದ ಸೈಟ್ಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಸದ್ಯ ಇಡಿ ತನಿಖೆ ಪ್ರಗತಿಯಲ್ಲಿದೆ.
ಇದನ್ನೂ ನೋಡಿ: ಪಾಲಾರ್ ಸಿನಿಮಾ | ಚನ್ನರಾಯಪಟ್ಟಣ ಭೂಸ್ವಾಧೀನ ಹೋರಾಟ Janashakthi Media
