ಪುಣೆ: ಅಂತರರಾಜ್ಯ ಅಕ್ರಮ ಶಸ್ತ್ರಾಸ್ತ್ರ ತಯಾರಿಕೆ ಮತ್ತು ಸಾಗಣೆ ದಂಧೆಯು ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆಯುತ್ತಿದ್ದೂ, ಇದೀಗ ಪುಣೆ ಪೊಲೀಸರು ಅವುಗಳನ್ನು ಭೇದಿಸಿದ್ದಾರೆ. ಘಟನೆಯಲ್ಲಿ 36 ಜನರನ್ನು ಬಂಧಿಸಲಾಗಿದೆ ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದ ಪುಣೆ ನಗರದಿಂದ ಸುಮಾರು 500 ಕಿ.ಮೀ ದೂರದಲ್ಲಿರುವ ನರೆಯ ಮಧ್ಯಪ್ರದೇಶದ ಉಮಾರ್ತಿ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವೇಳೆ ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡ ನಂತರ, ಮಧ್ಯಪ್ರದೇಶಕ್ಕೆ ಪೂರೈಕೆ ಸಂಪರ್ಕಗಳು ಕಂಡುಬಂದಿವೆ ಎಂದು ಹೇಳಿದರು.
ಇದನ್ನೂ ಓದಿ: ಆನೇಕಲ್| ಸೊಳ್ಳೆಪುರದಲ್ಲಿ ರೈತರ ಸಭೆ : ಕೆಐಎಡಿಬಿ ಭೂಸ್ವಾಧೀನ ಹೋರಾಟಕ್ಕೆ 138 ಪೂರ್ಣ
ಮಧ್ಯಪ್ರದೇಶ ಪೊಲೀಸರೊಂದಿಗೆ ಜಂಟಿಯಾಗಿ ನಡೆಸಲಾದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗುತ್ತಿದ್ದ 50 ಕುಲುಮೆಗಳನ್ನು ನಾಶಪಡಿಸಲಾಗಿದೆ ಎಂದು ಅವರು ಹೇಳಿದರು.
ವಿಮಂತಲ್ ಮತ್ತು ಕಾಲೇಪಡಲ್ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳ ತನಿಖೆಯ ಸಮಯದಲ್ಲಿ, ಮಧ್ಯಪ್ರದೇಶದಲ್ಲಿರುವ ಪಿಸ್ತೂಲ್ ತಯಾರಿಕಾ ಘಟಕಗಳ ಬಗ್ಗೆ ನಮಗೆ ಮಾಹಿತಿಗಳು ಬಂದವು ಎಂದು ಪುಣೆಯ ಜಂಟಿ ಪೊಲೀಸ್ ಆಯುಕ್ತ ರಂಜನ್ ಕುಮಾರ್ ಶರ್ಮಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿ ಶಸ್ತ್ರಾಸ್ತ್ರ ತಯಾರಿಕಾ ಘಟಕಗಳನ್ನು ಕೆಡವಲಾಯಿತು. ಒಟ್ಟು 36 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದರು.ಪುಣೆಗೆ ಈ ಶಸ್ತ್ರಾಸ್ತ್ರಗಳನ್ನು ಕಳುಹಿಸಿದವರಿಗಾಗಿ ಹುಡುಕಾಟ ನಡೆಯುತ್ತಿದೆ. ಈ ದಂಧೆಯಲ್ಲಿ ಇನ್ನೂ ಅನೇಕ ವ್ಯಕ್ತಿಗಳು ಭಾಗಿಯಾಗಿದ್ದಾರೆ ಮತ್ತು ವಿಚಾರಣೆ ಇನ್ನೂ ನಡೆಯುತ್ತಿದೆ ಎಂದು ಜಂಟಿ ಸಿಪಿ ಹೇಳಿದರು. ಪುಣೆಯ 105 ಪೊಲೀಸ್ ಸಿಬ್ಬಂದಿಗಳ ತಂಡ, ಉಪ ಪೊಲೀಸ್ ಆಯುಕ್ತ (ಡಿಸಿಪಿ) ಸೋಮಯ್ ಮುಂಡೆ ನೇತೃತ್ವದಲ್ಲಿ, ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.
ಇದನ್ನೂ ನೋಡಿ: ಹಾಸನ ಜನರ ಧ್ವನಿಯಾದ ಕಾರ್ಮಿಕ ಚಳವಳಿ Janashakthi Media
