ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟ: 570 ಜನರ ಬಂಧನ – ಕೆ.ಎಚ್.ಮುನಿಯಪ್ಪ

Please follow and like us:
ಬೆಳಗಾವಿ: ಸುವರ್ಣಸೌಧದದ ವಿಧಾನ ಪರಿಷತ್ ನಲ್ಲಿ ಸದಸ್ಯ ಸಿ. ಟಿ.ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಸಚಿವರು ಮಾತನಾಡಿದ ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, “ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ” ಎಂದು ತಿಳಿಸಿದರು.

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂದಿಸಿದಂತೆ ಒಟ್ಟು 29603.15 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ವಶಪಡಿಸಿಕೊಳ್ಳ ಲಾಗಿದೆ ಎಂದರು.

ಇದನ್ನೂ ಓದಿ: ಸಿರಾ | ನಮ್ಮ ಮಣ್ಣಿನಮನೆ ಬೀಳುವಂತಿದೆ ನಮಗೆ ಮನೆ ನಿರ್ಮಿಸಿ ಕೊಡಿ

ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನ್ಯ ಇಲಾಖೆಯ ಅಧಿಕಾರಿಗಳನ್ನು ಇಲಾಖೆ ಕರ್ತ್ಯವ್ಯದಿಂದ ಬಿಡುಗಡೆಗೊಳಿಸಲಾಗಿದೆ ಹಾಗೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೆ.ಎಫ್.ಸಿ.ಎಸ್.ಸಿ. ಗೋದಾಮು ಅಮಾನತ್ತುಗೊಳಿಸಲಾಗಿರುತ್ತದೆ.

ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯನಿರ್ವಹಕ ಸಿಬ್ಬಂದಿಗಳಿಗೆ ಕಾಲ ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದರು.

ಪಡಿತರ ಚೀಟಿದಾರರು ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಸದರಿ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂತವರ ವಿರುದ್ಧ ನಿಯಾಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ ಎಂದು ಪರಿಷತ್ ನಲ್ಲಿ ತಿಳಿಸಿದ ಸಚಿವ ಮುನಿಯಪ್ಪ ಅವರು, ನ್ಯಾಯಬೆಲೆ ಅಂಗಡಿ, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಿ ಪಡಿತರ ವಿತರಣೆಯನ್ನು ಪರಿಶೀಲಿಸಲಾಗುತ್ತಿದೆ ಎಂದರು.

ಇದನ್ನೂ ನೋಡಿ: ಚುನಾವಣಾ ಆಯೋಗ RSSನ ಶಾಖೆಯೆ? ಕ್ಲಿಪ್ಟನ್ ಡಿ ರೊಜಾರಿಯೋ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *